ಡೆಹ್ರಾಡೂನ್: ರೂರ್ಕಿ ಸರ್ಕಾರಿ ಪದವಿ ಕಾಲೇಜಿನಲ್ಲಿ 12 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 55 ವರ್ಷದ ಸಹಾಯಕ ಪ್ರಾಧ್ಯಾಪಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ಮಧ್ಯಾಹ್ನ ನಡೆದ ಬಿ.ಎಸ್ಸಿ ಪ್ರಾಯೋಗಿಕ ಪರೀಕ್ಷೆ ವೇಳೆ ಡಾ. ಅಬ್ದುಲ್ ಅಲೀಮ್ ಅನ್ಸಾರಿ ಅನುಚಿತವಾಗಿ ವಿದ್ಯಾರ್ಥಿನಿಯರನ್ನು ಮುಟ್ಟಿದ್ದಾರೆ ಎಂಬುದಾಗಿ ಸಂತ್ರಸ್ತೆಯೊಬ್ಬರು ದೂರು ನೀಡಿದ್ದಾರೆ.

ತರಗತಿ ಕೋಣೆಯಲ್ಲೇ ಈ ಘಟನೆ ನಡೆದಿದೆ. ಅನ್ಸಾರಿ ಅವರು ವಿದ್ಯಾರ್ಥಿನಿಯೊಬ್ಬರ ಕೈ ಮೇಲೆ ತಮ್ಮ ಮೊಬೈಲ್ ನಂಬರ್ ಬರೆದು, ಮನೆಗೆ ಹೋದ ನಂತರ ರಾತ್ರಿ ಕರೆ ಮಾಡುವಂತೆ ಹೇಳಿದ್ದಾನೆ ಎಂಬುದಾಗಿ ದೂರಿನಲ್ಲಿ ವಿವರಿಸಲಾಗಿದೆ ಎಂದು ಗಂಗ್ ನಹರ್ ಪೊಲೀಸ್ ಠಾಣಾಧಿಕಾರಿ ಆರ್.ಕೆ. ಸಕ್ಲಾನಿ ತಿಳಿಸಿದ್ದಾರೆ.

ಸಂತ್ರಸ್ತೆಯು ಕೊಠಡಿಯಿಂದ ಹೊರಗೆ ಬಂದ ನಂತರ ತನಗಾದ ಕೆಟ್ಟ ಅನುಭವದ ಬಗ್ಗೆ ಹೇಳಿಕೊಳ್ಳುತ್ತಿದ್ದಂತೆ, ಇತರ ಕೆಲವು ವಿದ್ಯಾರ್ಥಿನಿಯರು ತಮಗೂ ಅದೇ ರೀತಿ ಆಗಿದೆ ಎಂಬುದನ್ನು ಬಾಯಿಬಿಟ್ಟಿದ್ದಾರೆ. ವಿದ್ಯಾರ್ಥಿನಿಯರು ಅನ್ಸಾರಿ ವರ್ತನೆಗೆ ಪ್ರತಿರೋಧ ವ್ಯಕ್ತಪಡಿಸಿದಾಗ, ಅಂಕ ಕಡಿತ ಮಾಡುವುದಾಗಿ ಬೆದರಿಕೆ ಒಡ್ಡಲಾಗಿದೆ ಎಂಬುದೂ ತಿಳಿದುಬಂದಿದೆ.

ಈ ವಿಚಾರ ಬಹಿರಂಗವಾಗುತ್ತಿದ್ದಂತೆ, ಸಹಾಯಕ ಪ್ರಾಧ್ಯಾಪಕನ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ, ಪರಿಸ್ಥಿತಿ ನಿಯಂತ್ರಿಸುವ ಸಲುವಾಗಿ ಕಾಲೇಜು ಆಡಳಿತ ಪೊಲೀಸರಿಗೆ ವಿಷಯ ಮುಟ್ಟಿಸಿದೆ.

ಸಂತ್ರಸ್ತರ ದೂರಿನನ್ವಯ ಅನ್ಸಾರಿ ಅವರನ್ನು ಬಂಧಿಸಲಾಗಿದೆ ಎಂದು ಸಕ್ಲಾನಿ ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿನಿಯರನ್ನು ಮುಟ್ಟಿದ್ದಾಗಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿರುವ ಅನ್ಸಾರಿ, ಕೆಟ್ಟ ಉದ್ದೇಶವೇನೂ ಇರಲಿಲ್ಲ ಎಂದು ಹೇಳಿದ್ದಾರೆ. ಆದರೆ, ವಿದ್ಯಾರ್ಥಿನಿಯ ಕೈ ಮೇಲೆ ಮೊಬೈಲ್ ನಂಬರ್ ಬರೆದದ್ದೇಕೆ ಎಂಬುದಕ್ಕೆ ಸೂಕ್ತ ಉತ್ತರ ನೀಡಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಏತನ್ಮಧ್ಯೆ, ಬುಧವಾರ ಹಾಗೂ ಗುರವಾರ ಅನ್ಸಾರಿ ನಡೆಸಿದ್ದ ಪ್ರಾಯೋಗಿಕ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ ಎಂದು ಕಾಲೇಜು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.