ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉತ್ತರಾಖಂಡ: ಬಿಜೆಪಿ ಶಾಸಕಿ ಶೈಲಾ ರಾಣಿ ರಾವತ್ ನಿಧನ

Published 10 ಜುಲೈ 2024, 4:31 IST
Last Updated 10 ಜುಲೈ 2024, 4:31 IST
ಅಕ್ಷರ ಗಾತ್ರ

ಡೆಹ್ರಾಡೂನ್: ಉತ್ತರಾಖಂಡ ರಾಜ್ಯದ ಬಿಜೆಪಿ ಶಾಸಕಿ ಶೈಲಾ ರಾಣಿ ರಾವತ್ ಅನಾರೋಗ್ಯದಿಂದ ಮಂಗಳವಾರ ತಡ ರಾತ್ರಿ ನಿಧನರಾದರು. ಅವರಿಗೆ 68 ವರ್ಷ ವಯಸ್ಸಾಗಿತ್ತು.

ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಲ್ಲಿನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ರಾತ್ರಿ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಶೈಲಾ ರಾಣಿ ಅವರು 2022ರಲ್ಲಿ ಕೇದಾರನಾಥ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿ ಆಯ್ಕೆಯಾಗಿದ್ದರು. 

2012ರಲ್ಲಿ ಶೈಲಾ ರಾಣಿ ಕಾಂಗ್ರೆಸ್‌ ಪಕ್ಷದಿಂದ ಗೆದ್ದು ಮೊದಲ ಬಾರಿಗೆ ಶಾಸಕಿಯಾಗಿದ್ದರು. ನಂತರದ ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ವಿರುದ್ಧ ಬಂಡಾಯವೆದ್ದು ಬಿಜೆಪಿ ಸೇರಿದ್ದರು.

2016ರಲ್ಲಿ ಇವರೊಟ್ಟಿಗೆ 10 ಜನ ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT