ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡ | ಗುಂಡಿಕ್ಕಿ ಕರಸೇವಾ ಪ್ರಮುಖ್‌ ಹತ್ಯೆ

Published 28 ಮಾರ್ಚ್ 2024, 7:55 IST
Last Updated 28 ಮಾರ್ಚ್ 2024, 7:55 IST
ಅಕ್ಷರ ಗಾತ್ರ

ಡೆಹ್ರಾಡೂನ್‌: ಮುಸುಕುಧಾರಿ ದುಷ್ಕರ್ಮಿಗಳು ಉತ್ತರಾಖಂಡದ ನಾನಕಮಟ್ಟಾ ಗುರುದ್ವಾರಕ್ಕೆ ನುಗ್ಗಿ ಕರಸೇವಾ ಪ್ರಮುಖ್‌ ಬಾಬಾ ತಾರ್ಸೆಮ್ ಸಿಂಗ್‌ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಸಿಂಗ್‌ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿಯಲಿಲ್ಲ ಎಂದು ಉಲ್ಲೇಖಿಸಿ ಸುದ್ದಿಸಂಸ್ಥೆ ‘ಎಎನ್‌ಐ‘ ವರದಿ ಮಾಡಿದೆ.

‘ಇದು ಅತ್ಯಂತ ಗಂಭೀರವಾದ ವಿಷಯವಾಗಿದೆ. ಈಗಾಗಲೇ ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದು, ಈ ಪ್ರಕರಣ ಕುರಿತು ತನಿಖೆ ನಡೆಸಲು ವಿಶೇಷ ತಂಡ ರಚಿಸಿದೆ‘ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ತನಿಖೆಯನ್ನು ಚುರುಕುಗೊಳಿಸಿ, ದುಷ್ಕರ್ಮಿಗಳನ್ನು ಪತ್ತೆ ಹಚ್ಚಲಾಗುವುದು. ಈ ಹತ್ಯೆಯ ಹಿಂದಿನ ಉದ್ದೇಶವನ್ನು ಬಹಿರಂಗಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT