ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉತ್ತರಾಖಂಡ ರಸ್ತೆ ಅಪಘಾತ | 12 ಮಂದಿ ಸಾವು: ರಾಷ್ಟ್ರಪತಿ ಮುರ್ಮು, ಶಾ ಸಂತಾಪ

Published 15 ಜೂನ್ 2024, 13:35 IST
Last Updated 15 ಜೂನ್ 2024, 13:35 IST
ಅಕ್ಷರ ಗಾತ್ರ

ನವದೆಹಲಿ: ಉತ್ತರಾಖಂಡದ ರುದ್ರಪ್ರಯಾಗದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸಂತಾಪ ಸೂಚಿಸಿದ್ದಾರೆ.

ಇಂದು (ಶನಿವಾರ) ಬೆಳಿಗ್ಗೆ ಉತ್ತರಾಖಂಡದ ರಿಷಿಕೇಶ–ಬದರಿನಾಥ ಹೆದ್ದಾರಿಯಲ್ಲಿ ಟೆಂಪೊ ಟ್ರಾವೆಲರ್‌ ಕಮರಿಗೆ ಬಿದ್ದ ಪರಿಣಾಮ 12 ಮಂದಿ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಮುರ್ಮು, ‘ಉತ್ತರಾಖಂಡದ ರುದ್ರಪಯಾಗದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಲವು ಜನರು ಸಾವಿಗೀಡಾಗಿರುವ ಸುದ್ದಿ ದುಃಖಕರವಾಗಿದೆ. ಮೃತರ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ ಮತ್ತು ಘಟನೆಯಲ್ಲಿ ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

‘ಉತ್ತರಾಖಂಡದ ರುದ್ರಪ್ರಯಾಗದಲ್ಲಿ ಸಂಭವಿಸಿದ ರಸ್ತೆ ಅಪಘಾತ ಸುದ್ದಿಯು ದುಃಖಕರವಾಗಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಸ್ಥಳೀಯ ಆಡಳಿತ ಮತ್ತು ಎಸ್‌ಡಿಆರ್‌ಎಫ್‌ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಗಾಯಾಳುಗಳಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲಾಗುತ್ತಿದೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT