ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿಯರಿಗೆ ಅಸಭ್ಯ ವಿಡಿಯೊ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕನ ಬಂಧನ

Published 27 ಮಾರ್ಚ್ 2024, 3:31 IST
Last Updated 27 ಮಾರ್ಚ್ 2024, 3:31 IST
ಅಕ್ಷರ ಗಾತ್ರ

ಬುಲಂದ್‌ಶಹರ್: ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯೊಂದರ ಮುಖ್ಯ ಶಿಕ್ಷಕರೊಬ್ಬರು ಬಾಲಕಿಯರಿಗೆ ಮೊಬೈಲ್‌ನಲ್ಲಿ ಅಸಭ್ಯ ವಿಡಿಯೊಗಳನ್ನು ತೋರಿಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಪ್ರತಾಪ್ ಸಿಂಗ್ ಎಂದು ಗುರುತಿಸಲಾಗಿದೆ.

ಸಿಂಗ್‌ ಶಾಲೆಯಲ್ಲಿನ ಹೆಣ್ಣು ಮಕ್ಕಳನ್ನು ಅನುಚಿತವಾಗಿ ಸ್ಪರ್ಶಿಸುತ್ತಿದ್ದ. ಮೊಬೈಲ್‌ನಲ್ಲಿ ಅಸಭ್ಯ ವಿಡಿಯೊಗಳನ್ನು ತೋರಿಸಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

‘ಈ ಬಗ್ಗೆ ಮನೆಯಲ್ಲಿ ಯಾರಿಗಾದರೂ ತಿಳಿಸಿದರೆ ಪರೀಕ್ಷೆಯಲ್ಲಿ ಫೇಲ್‌ ಮಾಡುವುದಾಗಿ ಶಿಕ್ಷಕ ಬೆದರಿಕೆ ಒಡ್ಡಿದ್ದಾನೆ. ಇದರಿಂದಾಗಿ 9ರಿಂದ 12 ವರ್ಷದೊಳಗಿನ ಬಾಲಕಿಯರು ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದಾರೆ‘ ಎಂದು ದೂರುದಾರರೊಬ್ಬರು ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ ಹಾಗೂ ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ಮಿಶ್ರಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT