ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉ.ಪ್ರದೇಶದಲ್ಲಿ 'ಜಂಗಲ್ ರಾಜ್‌'; ಮಹಿಳೆಯರಿಗೆ ಸುರಕ್ಷತೆಯಿಲ್ಲ: ಪ್ರಿಯಾಂಕಾ ಗಾಂಧಿ

Published 7 ಮಾರ್ಚ್ 2024, 10:14 IST
Last Updated 7 ಮಾರ್ಚ್ 2024, 10:14 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶದ ಎಂಬುವುದು ಜಂಗಲ್‌ ರಾಜ್‌ (ಕಾಡು)ನಂತೆ ಭಾಸವಾಗುತ್ತಿದ್ದು, ಇಲ್ಲಿ ಮಹಿಳೆಯರು ವಾಸಿಸುತ್ತಿರುವುದೇ ದೊಡ್ಡ ಅಪರಾಧದಂತಿದೆ. ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯ ಪ್ರಶ್ನೆ ಎದುರಾಗಿದೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಕಳವಳ ವ್ಯಕ್ತಪಡಿಸಿದ್ದಾರೆ.

ಕಾನ್ಪುರದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಪ್ರಿಯಾಂಕಾ, ಅತ್ಯಾಚಾರಕ್ಕೆ ಒಳಗಾದ ಇಬ್ಬರು ಅಪ್ರಾಪ್ತ ಬಾಲಕಿಯರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಅವರ ತಂದೆಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತರ ಕುಟುಂಬದ ಮೇಲೆ ರಾಜಿ ಮಾಡಿಕೊಳ್ಳುವಂತೆ ಒತ್ತಡ ಹೇರಲಾಗಿತ್ತು. ಮಹಿಳೆಯರು ಈ ರಾಜ್ಯದಲ್ಲಿ ನ್ಯಾಯ ಕೇಳಿದರೆ ಅವರನ್ನು ನಿರ್ನಾಮ ಮಾಡುವ ಕೃತ್ಯ ನಡೆಯುತ್ತಿದೆ ಎಂದು ವಾದ್ರಾ ಆರೋಪಿಸಿದ್ದಾರೆ.

ಕಳೆದ ತಿಂಗಳು ಕಾನ್ಪುರದ ಘಟಂಪುರದಲ್ಲಿ ಇಟ್ಟಿಗೆ ಕಾರ್ಖಾನೆನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಕಾರ್ಖಾನೆಯ ಮಾಲೀಕ, ಆತನ ಮಗ, ಸೋದರಳಿಯ ಹಾಗೂ ಹೆಚ್ಚುವರಿ ಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಹರೀಶ್ ಎಂಬುವವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರದ ವಿಡಿಯೊವನ್ನು ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಘಟನೆ ನಡೆದ ಬಳಿಕ ಇಬ್ಬರು ಬಾಲಕಿಯರು (16 ಮತ್ತು 14 ವರ್ಷ) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇತ್ತೀಚೆಗೆ ಅವರ ತಂದೆಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT