ನವದೆಹಲಿ: ಜಲ ಜೀವನ್ ಮಿಷನ್ (ಜೆಜೆಎಂ) ಅಡಿಯಲ್ಲಿ 12.58 ಕೋಟಿಗೂ ಹೆಚ್ಚು ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕ ಒದಗಿಸಲಾಗಿದೆ ಎಂದು ಕೇಂದ್ರ ಸರ್ಕಾರವು ರಾಜ್ಯಸಭೆಗೆ ಸೋಮವಾರ ತಿಳಿಸಿದೆ.

ಮಿಷನ್ ಆರಂಭವಾದಾಗಿನಿಂದಲೂ (2019, ಆಗಸ್ಟ್) ಗ್ರಾಮೀಣರ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸುವಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ ಎಂದು ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ದೇಶದಲ್ಲಿ 19.36 ಕೋಟಿ ಗ್ರಾಮೀಣ ಕುಟುಂಬಗಳಿವೆ. ಯೋಜನೆ ಆರಂಭಕ್ಕೂ ಮುನ್ನ ಕೇವಲ 3.23 ಕೋಟಿ (ಶೇ 16.17ರಷ್ಟು) ಕುಟುಂಬಗಳಿಗೆ ಮಾತ್ರ ನಲ್ಲಿ ನೀರಿನ ಸಂಪರ್ಕ ಇತ್ತು. ಇವನ್ನು ಸೇರಿಸಿಕೊಂಡು, 2026ರ ಮಾರ್ಚ್ 3ರವರೆಗೆ ಒಟ್ಟು 15.82 (ಶೇ 81.71ರಷ್ಟು) ಕೋಟಿ ಕುಟುಂಬಗಳಿಗೆ ಸಂಪರ್ಕ ಕಲ್ಪಿಸಲಾಗಿದೆ. 2030ರ ವೇಳೆಗೆ ಎಲ್ಲ ಕುಟುಂಬಗಳಿಗೂ ನಲ್ಲಿ ನೀರು ಪೂರೈಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಜೆಜೆಎಂ ಮಾನದಂಡಗಳಿಗೆ ಅನುಗುಣವಾಗಿ ನಲ್ಲಿ ನೀರು ಪೂರೈಸುವವರೆಗೆ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸುವಂತೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.