ವಡಗೇರಾ: ‘ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಪಂಚ ರಾಜ್ಯಗಳ ಚುನಾವಣೆ ಮುಗಿದ ಬಳಿಕ ವಾಣಿಜ್ಯ ಹಾಗೂ ಗೃಹ ಬಳಕೆಯ ಗ್ಯಾಸ್ ಬೆಲೆ ಒಮ್ಮಿಂದೊಮ್ಮೆಲೆ ಹೆಚ್ಚಿಸಿರುವುದು ಖಂಡನೀಯ’ ಎಂದು ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಕಾರ್ಯದರ್ಶಿ ಫಕೀರ್ ಅಹ್ಮದ್ ಮರಡಿ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ಗಳ ಕೊರತೆ ಇಲ್ಲ ಎಂಬ ತಪ್ಪು ಮಾಹಿತಿಯನ್ನು ದೇಶದ ಜನರಿಗೆ ನೀಡುತ್ತಿದೆ. ಆದರೆ, ದೇಶದಲ್ಲಿ ಕಳೆದ ಎರಡು ತಿಂಗಳಿನಿಂದ ಸರಿಯಾಗಿ ಅಡುಗೆ ಗ್ಯಾಸ್ ಸಿಗದೆ ಜನ ಪರದಾಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಗ್ಯಾಸ್ ಸಿಲಿಂಡರ್ಗಳ ಕೊರತೆಯಿಂದಾಗಿ ಹೊಟೇಲ್ ಹಾಗೂ ಇನ್ನಿತರ ಕಡೆ ಕಟ್ಟಿಗೆ ತಂದು ಅಡುಗೆ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಏಕಾಏಕಿ ವಾಣಿಜ್ಯ ಗ್ಯಾಸ್ ಸಿಲಿಂಡರ್ಗಳ ಬೆಲೆ 19 ಕೆ.ಜಿಗೆ ₹993 ಹೆಚ್ಚಿಗೆ ಮಾಡಲಾಗಿದೆ. ಹಾಗೆಯೇ 5 ಕೆ.ಜಿ ಗ್ಯಾಸ್ ಸಿಲಿಂಡರ್ ಬೆಲೆ ₹ 260 ಹೆಚ್ಚಿಸಿ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಿದೆ’ ಎಂದು ಆರೋಪಿಸಿದ್ದಾರೆ.

‘ಇದೇ ರೀತಿ ದರ ಹೆಚ್ಚಳ ಮಾಡುತ್ತಾ ಹೋದಲ್ಲಿ ನಗರ ಪ್ರದೇಶದ ಹೊಟೇಲ್ಗಳು ಬಾಗಿಲು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿ, ಪಟ್ಟಣದ ವಾಸಿಗಳಿಗೆ ಇದು ಕಂಟಕವಾಗಿದೆ. ಬಿಜೆಪಿ ಆಡಳಿತಕ್ಕೆ ಬಂದಾಗಿನಿಂದಲೂ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಮಾಡುತ್ತಾ ಬಂದಿದ್ದು, ಕೂಡಲೇ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡು ಗೃಹಬಳಕೆ ಮತ್ತು ವಾಣಿಜ್ಯ ಸಿಲಿಂಡರ್ ಬೆಲೆ ಇಳಿಸಬೇಕು’ ಎಂದು ಮರಡಿ ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-30-646532396

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.