ಅಹಮದಾಬಾದ್: ಗುಜರಾತ್ನ ವಡೋದರಾ ಜಿಲ್ಲೆಯ ಪಾದರಾ ಬಳಿ ಬುಧವಾರ ಸಂಭವಿಸಿದ ಸೇತುವೆ ಕುಸಿತ ದುರಂತದಲ್ಲಿ 16 ಮಂದಿ ಮೃತಪಟ್ಟಿದ್ದು, ಕೆಲವರು ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಲೋಕೋಪಯೋಗಿ ಇಲಾಖೆಯ ನಾಲ್ವರು ಎಂಜಿನಿಯರ್ಗಳನ್ನು ಅಮಾನತುಗೊಳಿಸಿದ್ದಾರೆ.

ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎನ್.ಎಂ. ನಾಯಕವಾಲಾ, ಉಪ ಕಾರ್ಯನಿರ್ವಾಹಕ ಎಂಜಿನಿಯರ್ಗಳಾದ ಯು.ಸಿ. ಪಟೇಲ್, ಆರ್.ಟಿ. ಪಟೇಲ್ ಹಾಗೂ ಸಹಾಯಕ ಎಂಜಿನಿಯರ್ ಜೆ.ವಿ. ಶಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಡೋದರಾ ಸೇತುವೆ ಕುಸಿತ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ಇತರ ಸೇತುವೆಗಳನ್ನು ಪರಿಶೀಲನೆ ನಡೆಸುವಂತೆ ಭೂಪೇಂದ್ರ ಪಟೇಲ್ ಅವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಮಹಿಸಾಗರ ನದಿಗೆ ಕಟ್ಟಲಾದ ‘ಗಂಭೀರ ಸೇತುವೆ’ ಕುಸಿದು ಸಂಚರಿಸುತ್ತಿದ್ದ ಹಲವು ವಾಹನಗಳು ನದಿಗೆ ಬಿದ್ದಿದ್ದವು. ಬುಧವಾರ ರಾತ್ರಿ ಹೊತ್ತಿಗೆ ಸಾವಿನ ಸಂಖ್ಯೆ 10ಕ್ಕೆ ತಲುಪಿತ್ತು. ಶೋಧ ಕಾರ್ಯದಲ್ಲಿ ಮೃತದೇಹಗಳು ಪತ್ತೆಯಾಗಿದ್ದರಿಂದ, ಸಾವಿನ ಸಂಖ್ಯೆ 16ಕ್ಕೆ ಏರಿದೆ.

ಬುಧವಾರ ಬೆಳಿಗ್ಗೆ 7.30ರ ಸುಮಾರಿಗೆ ಸೇತುವೆಯ 10ರಿಂದ 15 ಮೀಟರ್ ಉದ್ದದ ಸ್ಲಾಬ್ ಕುಸಿದ ಪರಿಣಾಮ, ಆ ಸಂದರ್ಭದಲ್ಲಿ ಸಾಗುತ್ತಿದ್ದ ವಾಹನಗಳು ನದಿಗೆ ಬಿದ್ದಿದ್ದವು. ಇದರಲ್ಲಿ ಎರಡು ಟ್ರಕ್, ಎರಡು ವ್ಯಾನ್, ಒಂದು ರಿಕ್ಷಾ, ಒಂದು ದ್ವಿಚಕ್ರ ವಾಹನ ನದಿಗೆ ಬಿದ್ದಿದ್ದವು. ಘಟನೆಯಲ್ಲಿ ಗಾಯಗೊಂಡ ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಡೋದರಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಆನಂದ್ ತಿಳಿಸಿದ್ದಾರೆ.
.ವಡೋದರಾ ಸೇತುವೆ ಕುಸಿತ ಪ್ರಕರಣ: ಸಾವಿನ ಸಂಖ್ಯೆ 15ಕ್ಕೆ ಏರಿಕೆ; ತನಿಖೆ ಆರಂಭ.ವಡೋದರಾ ಸೇತುವೆ ಕುಸಿತ ಪ್ರಕರಣ: ಬಿದ್ದ ವಾಹನಗಳೆಷ್ಟು..? ಬದುಕಿದವರೆಷ್ಟು..?.ವಡೋದರಾ ಸೇತುವೆ ಕುಸಿತ: ಸಂತಾಪ ಸೂಚಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.