ಗುರುಗ್ರಾಮ: ಹರಿಯಾಣದ ಗುರುಗ್ರಾಮ ಜಿಲ್ಲೆಯ ಕಂಕ್ರೋಲಾ ಗ್ರಾಮದಲ್ಲಿ ಅಂಬೇಡ್ಕರ್ ಪ್ರತಿಮೆಯನ್ನು ಕೆಲವು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ಗ್ರಾಮಸ್ಥರು ದೂರು ನೀಡಿದ್ದು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಖೇರ್ಕಿ ದೌಲಾ ಪೊಲೀಸ್ ಠಾಣೆಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಶುಕ್ರವಾರ ರಾತ್ರಿ ಅಂಬೇಡ್ಕರ್ ಪ್ರತಿಮೆಗೆ ಹಾನಿಯಾಗಿರುವುದನ್ನು ಗುರುಗ್ರಾಮ ಮಹಾನಗರ ಪಾಲಿಕೆಯ ಉದ್ಯೋಗಿಯೊಬ್ಬರು ನೋಡಿ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಗ್ರಾಮಸ್ಥರು ಪೊಲೀಸರಿಗೆ ಘಟನೆ ಕುರಿತು ತಿಳಿಸಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.

ವಿಧ್ವಂಸಕ ಕೃತ್ಯ ಎಸಗಿರುವ ದುಷ್ಕರ್ಮಿಗಳ ಪತ್ತೆಗೆ ಶೋಧ ನಡೆಸಲಾಗುತ್ತಿದೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಖೇರ್ಕಿ ದೌಲಾ ಪೊಲೀಸ್ ಠಾಣೆಯ ಎಚ್ಎಚ್ಒ ಸತ್ಯೇಂದರ್ ಸಿಂಗ್ ಹೇಳಿದ್ದಾರೆ.

ಎರಡು ದಿನಗಳಲ್ಲಿ ಆರೋಪಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.