ನವದೆಹಲಿ: ರಾಜಸ್ಥಾನದ ಕೋಟಾ ಹಾಗೂ ಮಧ್ಯಪ್ರದೇಶದ ಉಜ್ಜೈನ್ ಜಿಲ್ಲೆಯ ನಾಗ್ಡಾ ವಿಭಾಗದ ನಡುವೆ ಗಂಟೆಗೆ 180 ಕಿ.ಮೀ ವೇಗದಲ್ಲಿ ವಂದೇ ಭಾರತ್ ಸ್ಲೀಪರ್ ರೈಲು ಚಲಿಸಿದ ವಿಡಿಯೊವನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

‘ಈ ರೈಲಿನಲ್ಲಿ ನೀರಿನ ಪರೀಕ್ಷೆ ಕೂಡ ನಡೆಸಲಾಗಿದೆ. ರೈಲ್ವೆ ಸುರಕ್ಷತಾ ಆಯುಕ್ತರು ಇಂದು ವಂದೇ ಭಾರತ್ ಸ್ಲೀಪರ್ ರೈಲನ್ನು ಪರೀಕ್ಷಿಸಿದ್ದಾರೆ. ಇದು ಕೋಟಾ-ನಾಗ್ಡಾ ವಿಭಾಗದ ನಡುವೆ ಗಂಟೆಗೆ 180 ಕಿ.ಮೀ ವೇಗದಲ್ಲಿ ಓಡಿತು. ಇದು ವಂದೇ ಭಾರತ್ ರೈಲಿನ ತಾಂತ್ರಿಕ ವೈಶಿಷ್ಟ್ಯವನ್ನು ಪ್ರದರ್ಶಿಸುತ್ತಿದೆ’ ಎಂದು ಅಶ್ವಿನಿ ವೈಷ್ಣವ್ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ವಂದೇ ಭಾರತ್ ಸ್ಲೀಪರ್ ರೈಲುಗಳು ಶೀಘ್ರದಲ್ಲೇ ಎಸಿ ದರ್ಜೆಯ ಪ್ರಯಾಣಿಕರಿಗಾಗಿ ಕಾರ್ಯಾಚರಣೆಗೆ ಸಿದ್ಧವಾಗಲಿವೆ. ಇದು ದೀರ್ಘ ಪ್ರಯಾಣದ ಸಮಯವನ್ನು ಇನ್ನಷ್ಟು ಅನುಕೂಲಕರವಾಗಿಸುತ್ತದೆ’ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

ರಾಜಸ್ಥಾನದ 40 ಕಿ.ಮೀ ಉದ್ದದ ಮಾರ್ಗದಲ್ಲಿ ಬಹು ಪ್ರಯೋಗಗಳಿಗೆ ಒಳಪಡಿಸಲಾದ ವಂದೇ ಭಾರತ್ ಸ್ಲೀಪರ್ ರೈಲು ಗಂಟೆಗೆ 180 ಕಿ.ಮೀ ಗರಿಷ್ಠ ವೇಗದಲ್ಲಿ ಚಲಿಸಿದೆ ಎಂದು ಜನವರಿಯಲ್ಲಿ ರೈಲ್ವೆ ಸಚಿವಾಲಯ ತಿಳಿಸಿತ್ತು.

‘ಈ ಯಶಸ್ವಿ ಪ್ರಯೋಗಗಳ ನಂತರ ರೈಲು ಪ್ರಯಾಣಿಕರಿಗೆ ವಿಶ್ವ ದರ್ಜೆಯ ಪ್ರಯಾಣದ ಅನುಭವ ಪಡೆಯಬಹುದಾಗಿದೆ’ ಎಂದು ಸಚಿವಾಲಯ ಹೇಳಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.