ತಿರುವನಂತಪುರಂ: ರಾಷ್ಟ್ರೀಯ ಗೀತೆ ವಂದೇ ಮಾತರಂ ಅನ್ನು ಪೂರ್ಣಹಾಡುವುದು ಕಡ್ಡಾಯವಲ್ಲ. ಏಕೆಂದರೆ, ಆ ನಿಟ್ಟಿನಲ್ಲಿ ಸಂಸತ್ತು ಯಾವುದೇ ಕಾನೂನು ಜಾರಿಗೆ ತಂದಿಲ್ಲ ಎಂದು ಕೇರಳಂ ಮುಖ್ಯಮಂತ್ರಿ ವಿ.ಡಿ. ಸತೀಶನ್ ಶುಕ್ರವಾರ ಹೇಳಿದ್ದಾರೆ.

ರಾಜ್ಯ ವಿಧಾನಸಭೆಯಲ್ಲಿ ತಾವು ಹಾಜರಿದ್ದ ಸಂದರ್ಭದಲ್ಲಿ ಯುಡಿಎಫ್ ಸರ್ಕಾರವು ವಂದೇ ಮಾತರಂ ಅನ್ನು ಪೂರ್ಣವಾಗಿ(ಆರೂ ಚರಣ) ಹಾಡದಿರುವ ಬಗ್ಗೆ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಕಳವಳ ವ್ಯಕ್ತಪಡಿಸಿದ ಬಗ್ಗೆ ವರದಿಗಾರರ ಪ್ರಶ್ನೆಗೆ ಸತೀಶನ್ ಉತ್ತರಿಸಿದರು.

ವಂದೇ ಮಾತರಂನ ಪೂರ್ಣ ಆರೂ ಚರಣ ಹಾಡದಿರುವುದು, ಬ್ಯಾಂಡ್ ಮೂಲಕ ಮಾತ್ರ ವಂದೇ ಮಾತರಂ ನುಡಿಸಿದ್ದು ಅರ್ಲೇಕರ್ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು.

ಕಾಂಗ್ರೆಸ್ ಮತ್ತು ಯುಡಿಎಫ್ ಮೈತ್ರಿಕೂಟವು ರಾಜಕೀಯ ಸಿದ್ಧಾಂತದ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸುತ್ತದೆ. ಪಕ್ಷದ ಕೇಂದ್ರ ನಾಯಕತ್ವದ ನಿರ್ಧಾರಗಳ ಪ್ರಕಾರ ಆಡಳಿತ ನಡೆಸುತ್ತದೆ ಎಂದು ಸತೀಶನ್ ಹೇಳಿದ್ದಾರೆ.

ಪಕ್ಷದ ಕೇಂದ್ರ ನಾಯಕತ್ವವು ಈ ವಿಷಯದ ಬಗ್ಗೆ ಸ್ಪಷ್ಟವಾದ ನಿಲುವನ್ನು ಹೊಂದಿದೆ. ಅದು ಮೈತ್ರಿಕೂಟಕ್ಕೂ ಅನ್ವಯಿಸುತ್ತದೆ ಎಂದು ಅವರು ಹೇಳಿದ್ದಾರೆ.

ವಂದೇ ಮಾತರಂ ಅನ್ನು ಪೂರ್ಣವಾಗಿ ಹಾಡುವುದು ಕಡ್ಡಾಯವಲ್ಲ. ಏಕೆಂದರೆ, ಸಂಸತ್ತು ಆ ನಿಟ್ಟಿನಲ್ಲಿ ಯಾವುದೇ ಕಾನೂನು ಜಾರಿಗೆ ತಂದಿಲ್ಲ. ಸಂಸತ್ತು ಹೊರಡಿಸಿದ ಕೆಲವು ಮಾರ್ಗಸೂಚಿಗಳು ಮಾತ್ರ ಇವೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಂದೇ ಮಾತರಂನ ಆರೂ ಚರಣ ಹಾಡಲಾಗಿತ್ತು.

ಜನವರಿ 28 ರಂದು ಕೇಂದ್ರದ ಗೃಹ ವ್ಯವಹಾರಗಳ ಸಚಿವಾಲಯದಿಂದ ಬಿಡುಗಡೆಯಾದ ನಿರ್ದೇಶನದಲ್ಲಿ ಮೂಲ ವಂದೇ ಮಾತರಂನ ಭಾಗವಾಗಿದ್ದ ಎಲ್ಲ ಆರು ಚರಣಗಳನ್ನು ಅಧಿಕೃತ ಕಾರ್ಯಕ್ರಮಗಳಲ್ಲಿ ಹಾಡಬೇಕೆಂದು ಸೂಚಿಸಲಾಗಿತ್ತು. 1950ರ ಸಂವಿಧಾನ ಸಭೆಯು ವಂದೇ ಮಾತರಂನ ಎರಡು ಚರಣಗಳನ್ನು ಮಾತ್ರ ಹಾಡುವುದಕ್ಕೆ ಅನುಮೋದನೆ ನೀಡಿತ್ತು,

r

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.