ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ್ಞಾನವಾಪಿ ಸಮೀಕ್ಷೆ ಪುರಾವೆ ದಾಖಲಿಸುವಂತೆ ಎಎಸ್‌ಐಗೆ ಆದೇಶ

Published 14 ಸೆಪ್ಟೆಂಬರ್ 2023, 16:01 IST
Last Updated 14 ಸೆಪ್ಟೆಂಬರ್ 2023, 16:01 IST
ಅಕ್ಷರ ಗಾತ್ರ

ವಾರಾಣಸಿ (ಪಿಟಿಐ): ಜ್ಞಾನವಾಪಿ ಮಸೀದಿಯ ಸಮೀಕ್ಷೆ ವೇಳೆ ಪತ್ತೆಯಾದ ಪುರಾವೆಗಳನ್ನು ಕಾಪಾಡುವಂತೆ, ದಾಖಲಿಸುವಂತೆ ಮತ್ತು ಅದನ್ನು ಪಟ್ಟಿಮಾಡಿ ಸಲ್ಲಿಸುವಂತೆ ಭಾರತೀಯ ಪುರಾತತ್ವ ಇಲಾಖೆಗೆ (ಎಎಸ್‌ಐ) ವಾರಾಣಸಿ ಜಿಲ್ಲಾ ನ್ಯಾಯಾಲಯವು ಬುಧವಾರ ಆದೇಶ ಹೊರಡಿಸಿದೆ.

ನ್ಯಾಯಾಧೀಶ ಎ.ಕೆ. ವಿಶ್ವೇಶ್‌ ಅವರು ಈ ಆದೇಶ ಹೊರಡಿಸಿದ್ದಾರೆ. ಆದೇಶದ ಪ್ರತಿಯನ್ನು ಸರ್ಕಾರ ಪರ ವಕೀಲರು, ಹಿಂದೂ ಮತ್ತು ಮುಸ್ಲಿಂ ಅರ್ಜಿದಾರರ ಪರ ವಕೀಲರಿಗೆ ಮರುದಿನ ನೀಡಲಾಯಿತು ಎಂದು ಹಿಂದೂ ಅರ್ಜಿದಾರರ ಪರ ವಕೀಲ ಮದನ್‌ ಮೋಹನ್‌ ಯಾದವ್‌ ಅವರು ತಿಳಿಸಿದ್ದಾರೆ. 

ಸಾಕ್ಷ್ಯನಾಶದ ಅಪಾಯವಿರುವ ಕಾರಣ ಎಎಸ್‌ಐ ಸಮೀಕ್ಷೆ ನಡೆಸುವ ವೇಳೆ ಮುಸ್ಲಿಮರಿಗೆ ಜ್ಞಾನವಾಪಿ ಮಸೀದಿ ಒಳಗೆ ಪ್ರವೇಶವನ್ನು ನಿರ್ಬಂಧಿಸಬೇಕು ಎಂದು ಕೋರಿ ಹಿಂದೂ ಅರ್ಜಿದಾರರಾದ ರಾಖಿ ಸಿಂಗ್ ಅವರು ಅರ್ಜಿ ಸಲ್ಲಿಸಿದ್ದರು.

ಸಂಬಂಧಪಟ್ಟ ಎಲ್ಲಾ ವಕೀಲರ ಸಮ್ಮುಖದಲ್ಲಿ ಸೆಪ್ಟೆಂಬರ್‌ 8ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯವು, ಸಮೀಕ್ಷೆ ನಡೆಸಿ ಅರ್ಜಿ ಸಲ್ಲಿಸಲು ನಾಲ್ಕು ವಾರಗಳ ಹೆಚ್ಚುವರಿ ಕಾಲಾವಕಾಶವನ್ನು ಎಎಸ್‌ಐಗೆ ನೀಡಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT