ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Gyanvapi Case: ಜ್ಞಾನವಾಪಿ ಸಮೀಕ್ಷೆಗೆ 8 ವಾರಗಳ ಹೆಚ್ಚುವರಿ ಕಾಲಾವಕಾಶ

Published 8 ಸೆಪ್ಟೆಂಬರ್ 2023, 14:37 IST
Last Updated 8 ಸೆಪ್ಟೆಂಬರ್ 2023, 14:37 IST
ಅಕ್ಷರ ಗಾತ್ರ

ವಾರಾಣಸಿ (ಉತ್ತರ ಪ್ರದೇಶ): ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆ ಪೂರ್ಣಗೊಳಿಸಿ ವರದಿ ನೀಡಲು ವಾರಾಣಸಿ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಎಂಟು ವಾರಗಳ ಹೆಚ್ಚುವರಿ ಸಮಯ ನೀಡಿದೆ.   

ಮಸೀದಿ ಆಡಳಿತ ಮಂಡಳಿಯ ಆಕ್ಷೇಪವನ್ನು ತಳ್ಳಿಹಾಕಿದ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್, ಎಎಸ್ಐಗೆ ಹೆಚ್ಚುವರಿ ಸಮಯ ನೀಡಿದರು ಎಂದು ಸರ್ಕಾರಿ ವಕೀಲ ರಾಜೇಶ್ ಮಿಶ್ರಾ ಹೇಳಿದರು.

ವಾರಾಣಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಆವರಣದಲ್ಲಿ ಎಎಸ್‌ಐ ವೈಜ್ಞಾನಿಕ ಸಮೀಕ್ಷೆ ನಡೆಸುತ್ತಿದೆ. ವೈಜ್ಞಾನಿಕ ಸಮೀಕ್ಷೆಯಿಂದ ಎರಡೂ ಕಡೆಯವರಿಗೂ ಅನುಕೂಲವಾಗಲಿದೆ ಎಂದು ಅಲಹಾಬಾದ್‌ ಹೈಕೋರ್ಟ್‌ ಈ ಹಿಂದೆ ಅಭಿಪ್ರಾಯಪಟ್ಟಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT