ಮುಂಬೈ: ಅನಾರೋಗ್ಯದಿಂದ ಬಳಲುತ್ತಿದ್ದ ನಾಂದೇಡ್‌ನ ಕಾಂಗ್ರೆಸ್ ಸಂಸದ ವಸಂತ ಚವಾಣ್ ಅವರು ಇಂದು (ಸೋಮವಾರ) ಹೈದರಾಬಾದ್‌ನಲ್ಲಿ ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ವಸಂತ ಚವಾಣ್ ಅವರಿಗೆ 70 ವರ್ಷ ವಯಸ್ಸಾಗಿತ್ತು. ನಾಂದೇಡ್‌ನಲ್ಲಿ ಚವಾಣ್ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ (ಎಂಪಿಸಿಸಿ) ತಿಳಿಸಿದೆ.
‘ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ನಾಂದೇಡ್ ಲೋಕಸಭಾ ಕ್ಷೇತ್ರದ ಸಂಸದ ವಸಂತರೋಜಿ ಚವಾಣ್ ಅವರ ನಿಧನದ ಸುದ್ದಿ ತುಂಬಾ ಆಘಾತಕಾರಿಯಾಗಿದೆ. ಅವರು ಪ್ರತಿಕೂಲ ಪರಿಸ್ಥಿತಿಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿದ್ದರು. ಈ ದುಃಖದ ಸಂದರ್ಭದಲ್ಲಿ ಇಡೀ ಕಾಂಗ್ರೆಸ್ ಪಕ್ಷ ಚವಾಣ್ ಕುಟುಂಬದ ಜೊತೆಗಿದೆ’ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.