ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ನಾಯಕ ತಿವಾರಿ ರಾಜೀನಾಮೆ

Last Updated 25 ಜೂನ್ 2018, 16:17 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಘನಶ್ಯಾಮ ತಿವಾರಿ ಎಂಬವರು ಸೋಮವಾರ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಪತ್ರ ಬರೆದು ಪಕ್ಷದಿಂದ ಹೊರ ನಡೆದಿದ್ದಾರೆ.

ಅಮಿತ್ ಶಾ ಅವರಿಗೆ ಬರೆದ ಪತ್ರದಲ್ಲಿ ಘನಶ್ಯಾಮ ತಿವಾರಿ ರಾಜೇ ಅವರ ಹೆಸರನ್ನು ಉಲ್ಲೇಖಿಸಿಲ್ಲ.ಅದರ ಬದಲುರಾಜಸ್ಥಾನ ಸರ್ಕಾರದ ಮುಖ್ಯಸ್ಥೆ, ಕೆಲವು ಸಚಿವರು ಮತ್ತು ಅಧಿಕಾರಿಗಳು ರಾಜ್ಯವನ್ನು ಕೊಳ್ಳೆ ಹೊಡೆಯುತ್ತಿದ್ದು, ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ತಮ್ಮ ಲಾಭಕ್ಕಾಗಿ ಮುಖ್ಯಮಂತ್ರಿಯವರು ಉನ್ನತ ಹುದ್ದೆಗಳಿಗೆ ನೇಮಕ ಮಾಡುವಾಗ ಸ್ವಜನ ಪಕ್ಷಪಾತ ಮಾಡುತ್ತಿದ್ದು ಹೊಸ ನಿಯಮಗಳನ್ನು ತರುತ್ತಿದ್ದಾರೆ.ಹೀಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.

ಸೋಮವಾರ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ತಿವಾರಿ, ದೇಶದಲ್ಲಿ ಮತ್ತು ರಾಜಸ್ಥಾನದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಏರ್ಪಟ್ಟಿದೆ.ಕಾಂಗ್ರೆಸ್ ಮತ್ತು ಬಿಜೆಪಿ ಭ್ರಷ್ಟಾಚಾರದಲ್ಲಿ ಕೈ ಜೋಡಿಸಿದೆ ಎಂದು ಹೇಳಿದ್ದಾರೆ.

ತಿವಾರಿ ರಾಜೀನಾಮೆಯಿಂದಾಗಿ ಬಿಜೆಪಿ ಮೇಲೆ ಯಾವುದೇ ಪರಿಣಾಮವುಂಟಾಗುವುದಿಲ್ಲ.ಪಕ್ಷದಲ್ಲಿ ಶಿಸ್ತು ಪಾಲಿಸದೇ ಇರುವ ನಾಯಕರಿಗೆ ಇಲ್ಲಿ ಜಾಗವಿಲ್ಲ ಎಂಬ ಸಂದೇಶವನ್ನು ಅವರು ಈ ಮೂಲಕ ನೀಡಿದ್ದಾರೆ ಎಂದುತಿವಾರಿ ರಾಜೀನಾಮೆ ಬಗ್ಗೆ ರಾಜಸ್ಥಾನದ ಹಂಗಾಮಿ ಬಿಜೆಪಿ ಅಧ್ಯಕ್ಷ ಅಶೋಕ್ ಪರ್ನಾಮಿ ಪ್ರತಿಕ್ರಿಯಿಸಿದ್ದಾರೆ.

ಸಂಗಾನೆರ್ (ಜೈಪುರ್) ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ತಿವಾರಿ, ಇತ್ತೀಚೆಗೆ ರೂಪೀಕರಣಗೊಂಡ ಭಾರತ್ ವಾಹಿನಿ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.ಈ ಪಕ್ಷದ ಮುಖ್ಯಸ್ಥ ತಿವಾರಿ ಅವರ ಮಗ ಅಖಿಲೇಶ್ ಆಗಿದ್ದು, ಕಳೆದ ವಾರ ಈ ಪಕ್ಷಕ್ಕೆ ಚುನಾವಣಾ ಆಯೋಗದಿಂದ ಅಂಗೀಕಾರ ಸಿಕ್ಕಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT