ವಯನಾಡ್(ಪಿಟಿಐ): ವಯನಾಡ್ ಮಾರ್ಗದಲ್ಲಿ ರಾತ್ರಿ ವೇಳೆ ಬಸ್ ಸಂಚಾರ ನಿಷೇಧ ಸಮಸ್ಯೆ ಪರಿಹರಿಸುವ ಕುರಿತು ಶಿಫಾರಸು ಮಾಡುವುದಕ್ಕಾಗಿ ತಜ್ಞರ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

‘ಈ ಸಮಸ್ಯೆ ಬಗೆಹರಿಸುವ ಸಲುವಾಗಿ ಬಂಡೀಪುರ ಅರಣ್ಯದಲ್ಲಿ ಸುರಂಗ ನಿರ್ಮಿಸಿ ಪರ್ಯಾಯ ಮಾರ್ಗ ಕಲ್ಪಿಸುವುದು ಕಾರ್ಯಸಾಧುವೇ ಎಂಬ ಬಗ್ಗೆ ಈ ಸಮಿತಿ ಅಧ್ಯಯನ ನಡೆಸಲಿದೆ ಎಂಬುದಾಗಿ ಸಚಿವ ಗಡ್ಕರಿ ತಿಳಿಸಿದ್ದಾರೆ’ ಎಂದು ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಹೇಳಲಾಗಿದೆ.

‘ಪ್ರಿಯಾಂಕಾ ಗಾಂಧಿ ಅವರು ಪ್ರತಿನಿಧಿಸುವ ವಯನಾಡ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಾಲ್ಕು ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರೀಯ ರಸ್ತೆ ಮೂಲಸೌಕರ್ಯ ನಿಧಿಯಡಿ(ಸಿಆರ್ಐಎಫ್) ₹105 ಕೋಟಿ ತೆಗೆದಿರಿಸಲಾಗಿದೆ ಎಂಬುದಾಗಿಯೂ ಗಡ್ಕರಿ ತಿಳಿಸಿದ್ದಾರೆ’ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.