ಚೆನ್ನೈ: ‘ತಮಿಳುನಾಡಿನಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುವುದನ್ನು ತಡೆಯಲು ಮತ್ತು ಜನರ ತೀರ್ಪನ್ನು ಗೌರವಿಸುವ ದೃಷ್ಠಿಯಿಂದ ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷಕ್ಕೆ ಸರ್ಕಾರ ರಚಿಸಲು ಬೆಂಬಲ ನೀಡಲಾಗಿದೆ’ ಎಂದು ವಿಕೆಸಿ ಪಕ್ಷದ ಮುಖ್ಯಸ್ಥ ತೋಲ್ ತಿರುಮಾವಳವನ್ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಟಿವಿಕೆಗೆ ಬೆಂಬಲ ನೀಡಿದರೂ ನಮ್ಮ ಪಕ್ಷ ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟದಲ್ಲಿಯೇ ಮುಂದುವರಿಯುತ್ತದೆ’ ಎಂದು ಸ್ಪಷ್ಟಪಡಿಸಿದ್ದಾರೆ.

‘ಪಕ್ಷದ ನಿಲುವನ್ನು ಈಗಾಗಲೇ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಅವರಿಗೆ ತಿಳಿಸಲಾಗಿದ್ದು, ವಿಕೆಸಿ ಮತ್ತು ಎಡಪಕ್ಷಗಳ ಈ ಒಮ್ಮತದ ನಿರ್ಧಾರಕ್ಕೆ ಅವರು ಸಮ್ಮತಿಸಿದ್ದಾರೆ. ವಿಜಯ್ ಅವರು ಸರ್ಕಾರ ರಚಿಸುವುದಕ್ಕೆ ನಾವು ಅಡ್ಡಿಯಾಗಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದು ಹೇಳಿದ್ದಾರೆ.

ಸಿಪಿಐ ರಾಜ್ಯ ಕಾರ್ಯದರ್ಶಿ ಎಂ. ವೀರಪಾಂಡಿಯನ್ ಮಾತನಾಡಿ, ‘ರಾಜ್ಯಪಾಲರು ಸಂವಿಧಾನವನ್ನು ಗೌರವಿಸುವ ಮೂಲಕ ಕಾನೂನಿನ ಪ್ರಕಾರ ನಡೆದುಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದ ಟಿವಿಕೆಗೆ ಸರ್ಕಾರ ರಚಿಸಲು ಬೆಂಬಲ ನೀಡುವುದಾಗಿ ವಿಸಿಕೆ ಶನಿವಾರ ಘೋಷಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.