ಚೆನ್ನೈ: ಎಐಎಡಿಎಂಕೆಯ ಬಂಡಾಯ ಶಾಸಕರನ್ನು ಮುಖ್ಯಮಂತ್ರಿ ಚಂದ್ರಶೇಖರ್ ಜೋಸೆಫ್ ವಿಜಯ್ ಅವರು ತಮ್ಮ ಸಂಪುಟಕ್ಕೆ ಸೇರಿಸಿಕೊಳ್ಳಬಾರದು. ಅವರನ್ನು ಸಂಪುಟಕ್ಕೆ ಸೇರಿಸಿಕೊಂಡರೆ ಗಂಭೀರ ರಾಜಕೀಯ, ಕಾನೂನಾತ್ಮಕ ಸಮಸ್ಯೆಗಳು ತಲೆದೋರಲಿವೆ ಎಂದು ವಿಡುತಲೈ ಚಿರುತೈಗಳ್ ಕಚ್ಚಿ (ವಿಚಿಕೆ) ನಾಯಕ ಡಿ. ರವಿಕುಮಾರ್ ಎಚ್ಚರಿಸಿದ್ದಾರೆ.

234 ಸದಸ್ಯ ಬಲದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) 108 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಡಿಎಂಕೆ 59 ಕಡೆ ಹಾಗೂ ಎಐಎಡಿಎಂಕೆ 47 ಕ್ಷೇತ್ರಗಳಲ್ಲಿ ಗೆಲುವು ಕಂಡಿವೆ.

ವಿಧಾನಸಭೆಯಲ್ಲಿ ಅತಿದೊಡ್ಡ ಪಕ್ಷವಾದರೂ ಟಿವಿಕೆಗೆ ಸರ್ಕಾರ ರಚಿಸಲು ಅಗತ್ಯ ಬಹುಮತ (118 ಸಂಖ್ಯೆ) ಇಲ್ಲದ ಕಾರಣ, ಐದು ಕ್ಷೇತ್ರಗಳಲ್ಲಿ ಗೆದ್ದಿರುವ ಕಾಂಗ್ರೆಸ್, ತಲಾ ಎರಡು ಕಡೆ ಜಯ ಸಾಧಿಸಿರುವ ಸಿಪಿಐ, ಸಿಪಿಐ(ಎಂ), ವಿಸಿಕೆ ಮತ್ತು ಐಯುಎಂಎಲ್ ಬೆಂಬಲದೊಂದಿಗೆ ಸರ್ಕಾರ ರಚಿಸಿದೆ.

ಸಿ.ವಿ. ಷಣ್ಮುಗಂ ನೇತೃತ್ವದಲ್ಲಿ ಎಐಎಡಿಎಂಕೆಯ 30ಕ್ಕೂ ಹೆಚ್ಚು ಶಾಸಕರು ಟಿವಿಕೆ ನೇತೃತ್ವದ ಮೈತ್ರಿ ಸರ್ಕಾರವನ್ನು ಬೆಂಬಲಿಸುವುದಾಗಿ ವಿಶ್ವಾಸಮತ ಸಾಬೀತಿಗೂ ಮುನ್ನವೇ ಘೋಷಿಸಿದ್ದರು. ಮೇ 13ರಂದು ನಡೆದ ವಿಶ್ವಾಸಮತ ಸಾಬೀತು ಪ್ರಕ್ರಿಯೆ ವೇಳೆ ಎಐಎಡಿಎಂಕೆಯ 25 ಶಾಸಕರು ಸರ್ಕಾರದ ಪರ ಮತ ಚಲಾಯಿಸಿದ್ದರು.

ಇದರಿಂದಾಗಿ, ಎಐಎಡಿಎಂಕೆಯಲ್ಲಿ ಬಣ ಜಗಳ ತಾರಕಕ್ಕೇರಿದೆ. ಸಚಿವ ಸ್ಥಾನದ ಆಮಿಷಕ್ಕೆ ಒಳಗಾಗಿ ಕೆಲವರು ಸರ್ಕಾರವನ್ನು ಬೆಂಬಲಿಸಿದ್ದಾರೆ ಎಂದು ಪಕ್ಷದ ಮುಖ್ಯಸ್ಥ ಎಡಪ್ಪಾಡಿ ಕೆ. ಪಳನಿಸ್ವಾಮಿ ಆರೋಪಿಸಿದ್ದಾರೆ.

ಅಡ್ಡ ಮತದಾನ ಮಾಡಿದ ಆರೋಪದಲ್ಲಿ 25 ಶಾಸಕರನ್ನೂ ಪಕ್ಷದ ಹುದ್ದೆಗಳಿಂದ ವಜಾ ಮಾಡಲಾಗಿದೆ. ಆದರೆ, ಈ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲು ಪಕ್ಷಾಂತರ ನಿಷೇಧ ಕಾಯ್ದೆ ಅನುಮತಿಸುವುದೇ ಎಂಬುದನ್ನು ಕಾದುನೋಡಬೇಕಿದೆ.

ಇದೀಗ, ಸದ್ಯದ ರಾಜಕೀಯ ಬೆಳವಣಿಗೆ ಕುರಿತು ಮಾತನಾಡಿರುವ ವಿಸಿಕೆ ಪ್ರಧಾನ ಕಾರ್ಯದರ್ಶಿ ಹಾಗೂ ವಿಲ್ಲುಪುರಂ ಸಂಸದ ಡಿ.ರವಿಕುಮಾರ್, ಒಂದು ವೇಳೆ ಮುಖ್ಯಮಂತ್ರಿ ವಿಜಯ್ ಅವರು ಎಐಎಡಿಎಂಕೆ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೋಳ್ಳಲು ಬಯಸಿದರೆ, ಅವರೆಲ್ಲ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಮತ್ತೊಮ್ಮೆ ಉಪಚುನಾವಣೆಯಲ್ಲಿ ಗೆದ್ದು ಬರುವಂತಾಗಬೇಕು. ಆ ರೀತಿ ಸಾಂವಿಧಾನಿಕ ಪ್ರಕ್ರಿಯೆ ಮೂಲಕ ಆಯ್ಕೆಯಾದರೆ ಮಾತ್ರವೇ, ಮುಂದೆ ಎದುರಾಗಬಹುದಾದ ಕಾನೂನಾತ್ಮಕ ಸಂಘರ್ಷಗಳಿಂದ ಪಾರಾಗಲು ಸಾಧ್ಯ ಎಂದು ಸಲಹೆ ನೀಡಿದ್ದಾರೆ.
.ತಮಿಳುನಾಡಿನಲ್ಲಿ ಎಐಎಡಿಎಂಕೆ ಬಣ ಜಗಳ ತಾರಕಕ್ಕೆ.ಎಐಎಡಿಎಂಕೆ: ಹೆಚ್ಚಿದ ಆಂತರಿಕ ಬಿರುಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.