ನವದೆಹಲಿ: ಕೇರಳದ ಮುಂದಿನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನುಕಾಂಗ್ರೆಸ್ ಗುರುವಾರ ಹೆಸರಿಸಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಊಹಾಪೋಹಗಳಿಗೆ ತೆರೆ ಬಿದ್ದಿದೆ.

ಕೇರಳದ ಎಐಸಿಸಿ ಉಸ್ತುವಾರಿ ದೀಪಾ ದಾಸ್ ಮುನ್ಷಿ ಹಾಗೂ ರಾಜ್ಯದ ಪಕ್ಷದ ಕೇಂದ್ರ ವೀಕ್ಷಕರಾದ ಅಜಯ್ ಮಾಕನ್ ಮತ್ತು ಮುಕುಲ್ ವಾಸ್ನಿಕ್ ಅವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ನೂತನ ಮುಖ್ಯಮಂತ್ರಿಯನ್ನು ಹೆಸರನ್ನು ಪ್ರಕಟಿಸಿದರು.

ಮುಖ್ಯಮಂತ್ರಿ ಸ್ಥಾನಕ್ಕೆ ಸತೀಶನ್, ಕೆ.ಸಿ. ವೇಣುಗೋಪಾಲ್ ಮತ್ತು ರಮೇಶ್ ಚೆನ್ನಿತ್ತಲ ಪ್ರಮುಖ ಸ್ಪರ್ಧಿಗಳಾಗಿದ್ದರು.

140 ಸದಸ್ಯರ ಕೇರಳ ವಿಧಾನಸಭೆಯಲ್ಲಿ ಕಾಂಗ್ರೆಸ್ 63 ಶಾಸಕರನ್ನು ಹೊಂದಿದೆ. ಅದರ ಮಿತ್ರಪಕ್ಷಗಳಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) 22, ಕೇರಳ ಕಾಂಗ್ರೆಸ್ (ಕೆಇಸಿ) ಎಂಟು ಮತ್ತು ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ (ಆರ್ಎಸ್ಪಿ) ಮೂರು ಸ್ಥಾನಗಳನ್ನು ಹೊಂದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.