ಸಕ್ತಿ (ಛತ್ತೀಸಗಢ): ಛತ್ತೀಸಗಢದ ವೇದಾಂತ ಕಂಪನಿಯ ಪವರ್ ಪ್ಲಾಂಟ್ನಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಮೃತಪಟ್ಟ ಕಾರ್ಮಿಕರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಸಿಂಘಿತರಾಯ್ ಗ್ರಾಮದ ಸಮೀಪವಿರುವ ವೇದಾಂತ ಲಿಮಿಟೆಡ್ ಕಂಪನಿಯ ಪವರ್ ಪ್ಲಾಂಟ್ನಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿತ್ತು. ಗಾಯಗೊಂಡ 10 ಕಾರ್ಮಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪರಿಹಾರ: ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರು ಮೃತರ ಕುಟುಂಬಕ್ಕೆ ತಲಾ ₹ 5 ಲಕ್ಷ ಹಾಗೂ ಗಾಯಾಳುಗಳಿಗೆ ₹ 50 ಸಾವಿರ ಪರಿಹಾರ ಘೋಷಿಸಿದ್ದಾರೆ.

ವೇದಾಂತ ಪವರ್ ಕಂಪನಿಯು ಮೃತರ ಕುಟುಂಬಕ್ಕೆ ತಲಾ ₹ 35 ಲಕ್ಷ ಪರಿಹಾರ ಮತ್ತು ಕುಟುಂಬದ ಒಬ್ಬರಿಗೆ ಉದ್ಯೋಗ ನೀಡುವುದಾಗಿ ಘೋಷಿಸಿದೆ. ಗಾಯಾಳುಗಳಿಗೆ ತಲಾ ₹ 15 ಲಕ್ಷ ನೀಡುವುದರ ಜೊತೆಗೆ, ಅವರು ಗುಣಮುಖರಾಗುವವರೆಗೆ ಸಂಬಳ ಪಾವತಿಸುವುದಾಗಿ ತಿಳಿಸಿದೆ.

ತನಿಖೆಗೆ ಆದೇಶ: ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಹೇಳಿದ್ದಾರೆ.

₹ 1 ಕೋಟಿ ಪರಿಹಾರಕ್ಕೆ ಕಾಂಗ್ರೆಸ್ ಆಗ್ರಹ: ವಿರೋಧ ಪಕ್ಷ ಕಾಂಗ್ರೆಸ್ ಈ ಘಟನೆಯನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಮತ್ತು ಕಂಪನಿಯ ಆಡಳಿತ ಮಂಡಳಿ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿದೆ. ಆಡಳಿತ ಮಂಡಳಿ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ ಎಂದು ಆರೋಪಿಸಿರುವ ಕಾಂಗ್ರೆಸ್, ಮೃತರ ಕುಟುಂಬಕ್ಕೆ ₹ 1 ಕೋಟಿ ಪರಿಹಾರ ನೀಡಬೇಕೆಂದು ಆಗ್ರಹಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.