ದಂತೇವಾಡ: ಛತ್ತೀಸಗಢದ ದಂತೇವಾಡದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗಿಯಾಗಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ವಾಹನವೊಂದು ಪಲ್ಟಿಯಾದ ಪರಿಣಾಮ ಕನಿಷ್ಠ 30 ಮಂದಿ ಗಾಯಗೊಂಡಿದ್ದಾರೆ. ಆ ಪೈಕಿ ಆರು ಜನರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಕ್ಸಲ್ ಪೀಡಿತ ಗ್ರಾಮವಾದ ಪೊಟಾಲಿಯಿಂದ ಸರಕು ಸಾಗಣೆ ವಾಹನದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ತೆರಳುವ ವೇಳೆ ಕುವಾಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

‘ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದ್ದು, ಕನಿಷ್ಠ 30 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಆರು ಜನರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಲ್ಲಿ ಕೆಲವರನ್ನು ಕುವಾಕೊಂಡ ಆರೋಗ್ಯ ಕೇಂದ್ರಕ್ಕೆ ಮತ್ತು ಇತರರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ನೇತೃತ್ವದ ಛತ್ತೀಸಗಢ ಸರ್ಕಾರ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮ 'ಬಸ್ತರ್ ಪಾಂಡುಮ್' ಉತ್ಸವದ ಸಮಾರೋಪ ಸಮಾರಂಭದಲ್ಲಿ ಅಮಿತ್ ಶಾ ಭಾಗವಹಿಸಿದ್ದರು.

ಶಸ್ತ್ರಾಸ್ತ್ರ ತ್ಯಜಿಸಲು ಅಮಿತ್ ಶಾ ಕರೆ

ಛತ್ತೀಸಗಢದ ಬಸ್ತಾರ್ ಪ್ರದೇಶದ ಬುಡಕಟ್ಟು ಜನಾಂಗದವರ ಅಭಿವೃದ್ಧಿ ತಡೆಯಲು ನಕ್ಸಲರಿಗೆ ಸಾಧ್ಯವಿಲ್ಲ. ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಅಭಿವೃದ್ಧಿಗೆ ಕೈಜೋಡಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ.

'ಬಸ್ತಾರ್ ಪಾಂಡುಮ್' ಉತ್ಸವದಲ್ಲಿ ಮಾತನಾಡಿದ ಅವರು, ನಕ್ಸಲಿಸಂ ಅನ್ನು 2026ರ ಮಾರ್ಚ್ ಒಳಗಾಗಿ ಸಂಪೂರ್ಣವಾಗಿ ತೊಡೆದು ಹಾಕಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಶರಣಾಗತಿಯಾದವರು ಮುಖ್ಯವಾಹಿನಿಗೆ ಬರಲು ಮತ್ತು ಸಮಾಜದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ಸರ್ಕಾರ ಸಹಾಯಹಸ್ತ ಚಾಚಲಿದೆ ಎಂದು ಭರವಸೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.