ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ ಟ್ರ್ಯಾಕಿಂಗ್‌ ಸಾಧನ ಕಡ್ಡಾಯ

ತುರ್ತು ಸಂದೇಶ ರವಾನೆ ವ್ಯವಸ್ಥೆಯೂ
Last Updated 31 ಅಕ್ಟೋಬರ್ 2018, 19:45 IST
ಅಕ್ಷರ ಗಾತ್ರ

ನವದೆಹಲಿ: ಸಾರ್ವಜನಿಕರು ಪ್ರಯಾಣಿಸುವ ವಾಹನಗಳಲ್ಲಿ ‘ವಾಹನ ಇರುವ ಸ್ಥಳ ಟ್ರ್ಯಾಕಿಂಗ್‌’ (ವಿಎಲ್‌ಟಿ) ಮತ್ತು ತುರ್ತು ಸಂದರ್ಭಗಳಲ್ಲಿ ಸಂದೇಶ ರವಾನಿಸುವ ಸಾಧನ ಅಳವಡಿಸುವುದು ಕಡ್ಡಾಯ ಎಂದು ಕೇಂದ್ರ ಭೂ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಸಚಿವಾಲಯ ಹೇಳಿದೆ.

ಮುಂದಿನ ಜನವರಿ 1ರ ನಂತರ ನೋಂದಣಿ ಮಾಡಿಸುವ ವಾಹನಗಳಿಗೆ ಈ ನಿಯಮ ಅನ್ವಯ ಎಂದು ಸಚಿವಾಲಯ ಬುಧವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಸಾಧನ ಅಳವಡಿಸಿದ ಕುರಿತು ಹಾಗೂ ಅದರಲ್ಲಿ ದಾಖಲಾದ ಮಾಹಿತಿಯನ್ನು ಸಚಿವಾಲಯಕ್ಕೆ ಸಲ್ಲಿಸಬೇಕು. ಆಟೊ ಮತ್ತು ಇ–ರಿಕ್ಷಾಗಳಿಗೆ ಈ ನಿಯಮ ಅನ್ವಯವಾಗದು ಎಂದೂ ಪ್ರಕಟಣೆ ತಿಳಿಸಿದೆ.

ಪ್ರಯಾಣಿಕರು, ಅದರಲ್ಲೂ ಮಹಿಳೆಯರ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT