ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನನಷ್ಟ: ಬಿಜೆಪಿ ಅಭ್ಯರ್ಥಿ ವಿರುದ್ಧ ವೇಣುಗೋಪಾಲ್‌ ದೂರು

Published 13 ಮಾರ್ಚ್ 2024, 23:44 IST
Last Updated 13 ಮಾರ್ಚ್ 2024, 23:44 IST
ಅಕ್ಷರ ಗಾತ್ರ

ಅಲಪ್ಪುಳ(ಕೇರಳ): ಗಣಿಗಾರಿಕೆ ಮಾಫಿಯಾದೊಂದಿಗೆ ಶಾಮೀಲಾಗಿ, ಭಾರಿ ಪ್ರಮಾಣದ ಸಂಪತ್ತು ಗಳಿಸಿದ್ದಾಗಿ ಆರೋಪಿಸಿರುವ ಬಿಜೆಪಿ ಅಭ್ಯರ್ಥಿ ಶೋಭಾ ಸುರೇಂದ್ರನ್‌ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ವೇಣುಗೋಪಾಲ್‌ ಅವರು ಅಲಪ್ಪುಳ ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಶೋಭಾ ಅವರು ಅಲಪ್ಪುಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿ. ಇತ್ತೀಚೆಗೆ ಟಿ.ವಿ.ವಾಹಿನಿಯೊಂದರಲ್ಲಿ ಪ್ರಸಾರವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ವೇಣುಗೋಪಾಲ್ ವಿರುದ್ಧ ಈ ಆರೋಪ ಮಾಡಿದ್ದರು. 

ತಮ್ಮ ವಿರುದ್ಧದ ದೂರಿಗೆ ಪ್ರತಿಕ್ರಿಯಿಸಿರುವ ಶೋಭಾ ಸುರೇಂದ್ರನ್‌, ‘ತಮ್ಮ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿರುವ ವೇಣುಗೋಪಾಲ್‌ ನಡೆಯನ್ನು ಸ್ವಾಗತಿಸುತ್ತೇನೆ. ತಮ್ಮ ಬಳಿ ಇರುವ ಸಾಕ್ಷ್ಯಗಳ ಆಧಾರದ ಮೇಲೆಯೇ ನಾನು ಅವರ ವಿರುದ್ಧ ಆರೋಪಗಳನ್ನು ಮಾಡಿರುವೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT