ಪಣಜಿ: ‘ತೆಹೆಲ್ಕಾ’ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ವಿರುದ್ಧದ ಅತ್ಯಾಚಾರ ಪ್ರಕರಣದ ತೀರ್ಪನ್ನು ಗೋವಾ ಸೆಷನ್ಸ್ ನ್ಯಾಯಾಲಯ ಮಂಗಳವಾರ ಪ್ರಕಟಿಸಲಿದೆ.

2013ರಲ್ಲಿ ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರ ಎಸಗಿರುವ ದೂರು ತೇಜ್‌ಪಾಲ್ ವಿರುದ್ಧ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ಕಳೆದ ಮಾರ್ಚ್‌ನಲ್ಲಿ ಮುಕ್ತಾಯಗೊಂಡಿದ್ದು, ತೀರ್ಪನ್ನು ಏಪ್ರಿಲ್ 27ಕ್ಕೆ ಪ್ರಕಟಿಸುವುದಾಗಿ ನ್ಯಾಯಾಲಯ ತಿಳಿಸಿತ್ತು. ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಕ್ಷಮಾ ಜೋಶಿ ಅವರು ಇಂದು ತೀರ್ಪು ನೀಡುವರು.

ಏನಿದು ಪ್ರಕರಣ?

ತೆಹಲ್ಕಾದ ಸಂಸ್ಥಾಪಕ -ಸಂಪಾದಕ ತರುಣ್ ತೇಜ್‌ಪಾಲ್ 2013ರಲ್ಲಿ ಥಿಂಕ್ ಫೆಸ್ಟ್ ಕಾರ್ಯಕ್ರಮದ ವೇಳೆ ಲೈಂಗಿಕ ದೌರ್ಜನ್ಯವೆಸಗಿದ್ದರು ಎಂದು ಅದೇ ಸಂಸ್ಥೆಯ ಕಿರಿಯ ಸಹೋದ್ಯೋಗಿಯೊಬ್ಬರು ಆರೋಪಿಸಿದ್ದರು. ಪಂಚತಾರಾ ಹೋಟೆಲ್‌ನ ಲಿಫ್ಟ್‌ನಲ್ಲಿ 52ರ ಹರೆಯದ ತರುಣ್ ಲೈಂಗಿಕ ದೌರ್ಜನ್ಯವೆಸಗಿದ್ದರು ಎಂದು ಸಂತ್ರಸ್ತೆ ದೂರು ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.