ಭಾನುವಾರ, 1 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಪ್ರದೇಶ: ವಿಎಚ್‌ಪಿ ಪದಾಧಿಕಾರಿ ಮೇಲೆ ಗುಂಡಿನ ದಾಳಿ

Published 12 ಆಗಸ್ಟ್ 2023, 15:40 IST
Last Updated 12 ಆಗಸ್ಟ್ 2023, 15:40 IST
ಅಕ್ಷರ ಗಾತ್ರ

ಸಹಾರನ್ಪುರ (ಉತ್ತರಪ್ರದೇಶ): ‘ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ ಪರಿಣಾಮವಾಗಿ ವಿಶ್ವ ಹಿಂದೂ ಪರಿಷತ್‌ನ (ವಿಎಚ್‌ಪಿ) ಪದಾಧಿಕಾರಿಯೊಬ್ಬರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಸಹಾರನ್ಪುರ ನಗರದ ಗಗಲ್‌ಹೇರಿ ಪ್ರದೇಶದಲ್ಲಿ ನಡೆದಿದೆ’ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

‘ವಿಎಚ್‌ಪಿಯ ಸಹರಾನ್ಪುರ ಘಟಕದ ಸಹ ಕಾರ್ಯದರ್ಶಿ ಅಭಿಷೇಕ್‌ ಪಂಡಿತ್‌ ಗಾಯಗೊಂಡವರು. ಶುಕ್ರವಾರ ರಾತ್ರಿ 10.45ರ ಸುಮಾರಿಗೆ ಅಭಿಷೇಕ್‌ ಅವರು ತಮ್ಮ ಮನೆಯ ಆಚೆ ವಿಹರಿಸುತ್ತಿದ್ದಾಗ ಈ ಘಟನೆ ನಡೆದಿದೆ. ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ’ ಎಂದು ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ ವಿಪಿನ್‌ ತಾಡಾ ಹೇಳಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT