ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್‌: ವಿಎಚ್‌ಪಿ ನಾಯಕನ ಹತ್ಯೆ

Published 14 ಏಪ್ರಿಲ್ 2024, 14:26 IST
Last Updated 14 ಏಪ್ರಿಲ್ 2024, 14:26 IST
ಅಕ್ಷರ ಗಾತ್ರ

ರೂಪನಗರ: ಪಂಜಾಬ್‌ನ ನಂಗಾಲ್‌ ನಗರದಲ್ಲಿ, ಬೈಕ್‌ನಲ್ಲಿ ಬಂದ ಅಪರಿಚಿತರಿಬ್ಬರು ಅಂಗಡಿಯೊಳಗೆ ನುಗ್ಗಿ ವಿಶ್ವ ಹಿಂದೂ ಪರಿಷತ್‌ನ (ವಿಎಚ್‌ಪಿ) ಸ್ಥಳೀಯ ನಾಯಕರೊಬ್ಬರನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮೃತ ವ್ಯಕ್ತಿ ವಿಕಾಸ್‌ ಬಗ್ಗಾ ಅವರು ವಿಚ್‌ಪಿ ನಂಗಾಲ್‌ ಘಟಕದ ಅಧ್ಯಕ್ಷರು. ಶನಿವಾರ ಸಂಜೆ ಬಗ್ಗಾ ಅವರ ಅಂಗಡಿಗೆ ನುಗ್ಗಿದ ಹಂತಕರು ಗುಂಡಿನ ದಾಳಿ ನಡೆಸಿದ್ದಾರೆ.

‘ಆರೋಪಿಗಳ ಪತ್ತೆಗಾಗಿ ಸುತ್ತ–ಮುತ್ತಲಿನ ಪ್ರದೇಶದಲ್ಲಿರುವ ಸಿ.ಸಿ.ಟಿ.ವಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಗ್ಗಾ ಅವರ ಹತ್ಯೆಯನ್ನು ಖಂಡಿಸಿ ಭಾನುವಾರ ಪ್ರತಿಭಟನೆ ನಡೆಸಿದ ವಿಎಚ್‌ಪಿ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರು ಪಂಜಾಬ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT