ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೌಕಾಪಡೆ ಮುಖ್ಯಸ್ಥರಾಗಿ ಏ.30ಕ್ಕೆ ವೈಸ್ ಅಡ್ಮಿರಲ್ ತ್ರಿಪಾಠಿ ಅಧಿಕಾರ

Published 19 ಏಪ್ರಿಲ್ 2024, 15:10 IST
Last Updated 19 ಏಪ್ರಿಲ್ 2024, 15:10 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ನೌಕಾಪಡೆಯ ಉಪ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿರುವ ವೈಸ್ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ ಅವರು ಏಪ್ರಿಲ್ ತಿಂಗಳ ಕೊನೆಯಲ್ಲಿ ನೌಕಾಪಡೆಯ ಮುಖ್ಯಸ್ಥರಾಗಿ ಬಡ್ತಿ ಹೊಂದಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ನೌಕಾಪಡೆಯ ಹಾಲಿ ಮುಖ್ಯಸ್ಥ ಅಡ್ಮಿರಲ್ ಆರ್. ಹರಿ ಕುಮಾರ್ ಏಪ್ರಿಲ್ 30ರಂದು ನಿವೃತ್ತಿ ಹೊಂದಲಿದ್ದಾರೆ. ಅದೇ ದಿನವೇ ದಿನೇಶ್ ಕುಮಾರ್ ತ್ರಿಪಾಠಿ ಅವರು ನೌಕಾಪಡೆಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ರಕ್ಷಣಾ ಇಲಾಖೆ ಹೇಳಿದೆ. 

ಖಡಕ್‌ವಾಸಲಾದ ನ್ಯಾಷನಲ್‌ ಡಿಫೆನ್ಸ್‌ ಅಕಾಡೆಮಿಯ ಹಳೆಯ ವಿದ್ಯಾರ್ಥಿ ಆಗಿರುವ ಅವರು, 1985ರ ಜುಲೈ 1ರಿಂದ ಭಾರತೀಯ ನೌಕಾಪಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. 

ಸಂವಹನ ಮತ್ತು ಎಲೆಕ್ಟ್ರಾನಿಕ್‌ ಯುದ್ಧತಜ್ಞರೂ ಆಗಿರುವ ಅವರಿಗೆ ಈ ಕ್ಷೇತ್ರದಲ್ಲಿ ಸುಮಾರು 30 ವರ್ಷಗಳ ಸೇವಾ ಅನುಭವವಿದೆ. ನೌಕಾಪಡೆಯು ಮುಂಚೂಣಿ ಯುದ್ಧ ನೌಕೆಗಳಲ್ಲಿ ಸಿಗ್ನಲ್ ಸಂವಹನ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಭಾರತೀಯ ನೌಕಾ ಹಡಗುಗಳಾದ ವಿನಾಶ್‌ನಲ್ಲಿ ಕಮಾಂಡರ್‌ ಆಗಿ ಸೇವೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT