ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಾಧೀಶ ಬಿ. ಸುದರ್ಶನ್ ರೆಡ್ಡಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.

ಈ ವೇಳೆ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಎನ್ಸಿಪಿ(ಎಸ್ಪಿ) ಮುಖ್ಯಸ್ಥ ಶರದ್ ಪವಾರ್, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇದ್ದರು.

ಬುಧವಾರ ಎನ್ಡಿಎ ಮೈತ್ರಿಕೂಟ ಅಭ್ಯರ್ಥಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಉಪ ರಾಷ್ಟ್ರಪತಿ ಚುನಾವಣೆಗೆ ಲೋಕಸಭೆ ಹಾಗೂ ರಾಜ್ಯಸಭೆಯ ಸದಸ್ಯರು, ರಾಜ್ಯಸಭೆಯ ನಾಮ ನಿರ್ದೇಶಿತ ಸದಸ್ಯರು ಮತ ಚಲಾಯಿಸಬಹುದಾಗಿದೆ.

ಉಭಯ ಸದನಗಳಲ್ಲಿ 781 ಸದಸ್ಯರ ಬಲ ಹೊಂದಿದ್ದು, ಬಹುಮತ ಪಡೆಯಲು 391 ಸದಸ್ಯರ ಬೆಂಬಲ ಅಗತ್ಯ. ಆಡಳಿತರೂಢ ಎನ್ಡಿಎ ಮೈತ್ರಿಕೂಟವು 422 ಸದಸ್ಯರ ಬಲ ಹೊಂದಿದೆ. ವೈಎಸ್ಆರ್ಸಿಪಿ ಪಕ್ಷವು ಕೂಡ ಈಗಾಗಲೇ ರಾಧಾಕೃಷ್ಣನ್ ಅವರಿಗೆ ಬೆಂಬಲ ಘೋಷಿಸಿದೆ.

ಸೆಪ್ಟೆಂಬರ್ 9ರಂದು ಉಪ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.