ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಕಣಕ್ಕಿಳಿಯಲಿದ್ದಾರೆ.

ಸಿ.ಪಿ. ರಾಧಾಕೃಷ್ಣನ್ ಕೊಯಮತ್ತೂರಿನಿಂದ ಎರಡು ಬಾರಿ ಸಂಸದರಾಗಿದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರ ನಾಯಕತ್ವದಡಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

1957ರ ಅಕ್ಟೋಬರ್ 20ರಂದು ತಮಿಳುನಾಡಿನ ತಿರುಪ್ಪೂರಿನಲ್ಲಿ ಜನಿಸಿದ ರಾಧಾಕೃಷ್ಣನ್ ಅವರು 1970ರ ದಶಕದಲ್ಲಿ ಆರ್ಎಸ್ಎಸ್ಗೆ ಸೇರಿದ್ದರು. 2023ರಲ್ಲಿ ಅವರನ್ನು ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು.

ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ಉಪರಾಷ್ಟ್ರಪತಿ ಸ್ಥಾನ ತೆರವಾಗಿದ್ದು, ಸೆಪ್ಟೆಂಬರ್ 9ರಂದು ಚುನಾವಣೆ ನಿಗದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಎನ್ಡಿಎ ಅಭ್ಯರ್ಥಿ ಆಯ್ಕೆ ಮಾಡುವ ಅಧಿಕಾರ ನೀಡಲಾಗಿತ್ತು.
.ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ: ಚುನಾವಣಾ ಆಯೋಗ.ಉಪ ರಾಷ್ಟ್ರಪತಿ ಚುನಾವಣೆ ಪ್ರಕ್ರಿಯೆ ಆರಂಭ: ಅಭ್ಯರ್ಥಿ ಆಯ್ಕೆಗೆ ಕಸರತ್ತು ಶುರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.