ನವದೆಹಲಿ: ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬುಧವಾರ ಬಿಡುಗಡೆಯಾಗಿದ್ದಾರೆ.

ಎದೆ ನೋವು ಕಾಣಿಸಿಕೊಂಡ ಕಾರಣ ಮಾರ್ಚ್ 9ರಂದು ಧನಕರ್ ಅವರನ್ನು ದೆಹಲಿಯ ಏಮ್ಸ್ಗೆ ದಾಖಲಿಸಲಾಗಿತ್ತು.

‘ವೈದ್ಯರ ತಂಡ ಉಪರಾಷ್ಟ್ರಪತಿ ಧನಕರ್ ಅವರನ್ನು ಕಾಳಜಿಯಿಂದ ನೋಡಿಕೊಂಡಿದೆ. ಅವರು ಉತ್ತಮ ರೀತಿಯಲ್ಲಿ ಚೇತರಿಸಿಕೊಂಡ ಕಾರಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಮುಂದಿನ ಕೆಲವು ದಿನ ವಿಶ್ರಾಂತಿಗೆ ಸೂಚಿಸಲಾಗಿದೆ’ ಎಂದು ದೆಹಲಿಯ ಏಮ್ಸ್ ತಿಳಿಸಿದೆ.

ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಧನಕರ್, ಏಮ್ಸ್ ವೈದ್ಯರ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.

ಆಸ್ಪತ್ರೆಗೆ ದಾಖಲಾಗಿದ್ದ ಧನಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ, ಸಚಿವ ಜೆ.ಪಿ. ನಡ್ಡಾ ಸೇರಿ ಹಲವರು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.
.ಆರೋಗ್ಯದಲ್ಲಿ ಏರುಪೇರು: ಉಪರಾಷ್ಟ್ರಪತಿ ಜಗದೀಪ್ ಧನಕರ್ ಆಸ್ಪತ್ರೆಗೆ ದಾಖಲು.ಉಪರಾಷ್ಟ್ರಪತಿ ಜಗದೀಪ್ ಧನಕರ್ ಆಸ್ಪತ್ರೆಗೆ ದಾಖಲು: ಪ್ರಧಾನಿ ಮೋದಿ ಭೇಟಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.