ನವದೆಹಲಿ: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ವೈದ್ಯಕೀಯ ಕಾರಣಗಳನ್ನು ನೀಡಿ ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಿದ್ದು, ‘ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.

‘ಆರೋಗ್ಯದ ಮೇಲೆ ಹೆಚ್ಚಿನ ಗಮನಹರಿಸಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿ ತಕ್ಷಣವೇ ಜಾರಿಗೆ ಬರುವಂತೆ ಭಾರತದ ಉಪ ರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ರಾಷ್ಟ್ರಪತಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

74 ವರ್ಷದ ಧನಕರ್ ಅವರು 2022ರ ಆಗಸ್ಟ್ನಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಅವರ ಅಧಿಕಾರದ ಅವಧಿ 2027ರ ವರೆಗೂ ಇತ್ತು. ರಾಜ್ಯಸಭೆಯ ಸಭಾಪತಿಯೂ ಆಗಿರುವ ಅವರು ಸೋಮವಾರ ಆರಂಭವಾದ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಕಲಾಪದಲ್ಲಿ ಪಾಲ್ಗೊಂಡಿದ್ದರು.

ತಮ್ಮ ಅಧಿಕಾರದ ಅವಧಿಯಲ್ಲಿ ಅಚಲ ಬೆಂಬಲ ನೀಡಿದ್ದಕ್ಕೆ ಮತ್ತು ಪರಸ್ಪರ ಸಹಕಾರದೊಂದಿಗೆ ಕೆಲಸ ನಿರ್ವಹಿಸಲು ಅವಕಾಶ ಮಾಡಿಕೊಟ್ಟದ್ದಕ್ಕೆ ರಾಷ್ಟ್ರಪತಿಯವರಿಗೆ ಧನ್ಯವಾದ ಅರ್ಪಿಸಿದ್ದಾರೆ.

‘ಪ್ರಧಾನ ಮಂತ್ರಿ ಮತ್ತು ಸಚಿವ ಸಂಪುಟದ ಎಲ್ಲ ಸದಸ್ಯರಿಗೆ ಹೃದಯಾಂತರಾಳದ ಕೃತಜ್ಞತೆ ಸಲ್ಲಿಸುತ್ತೇನೆ. ಪ್ರಧಾನ ಮಂತ್ರಿ ಅವರು ನೀಡಿರುವ ಸಹಕಾರ ಮತ್ತು ಬೆಂಬಲ ಅಮೂಲ್ಯವಾದುದು. ಅಧಿಕಾರದಲ್ಲಿದ್ದಾಗ ನಾನು ಬಹಳಷ್ಟು ಕಲಿತಿದ್ದೇನೆ’ ಎಂದು ಪತ್ರದಲ್ಲಿ ಹೇಳಿದ್ದಾರೆ. ‘ಸಂಸತ್ ಸದಸ್ಯರು ತೋರಿಸಿರುವ ಪ್ರೀತಿ, ಗೌರವ ಸದಾ ಕಾಲ ನನ್ನ ನೆನಪಿನಲ್ಲಿ ಉಳಿಯಲಿದೆ. ನಮ್ಮ ಮಹಾನ್ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉಪ ರಾಷ್ಟ್ರಪತಿಯಾಗಿ ಗಳಿಸಿದ ಅನುಭವಗಳು ಮತ್ತು ಒಳನೋಟಗಳಿಗೆ ತುಂಬಾ ಕೃತಜ್ಞನಾಗಿದ್ದೇನೆ’ ಎಂದಿದ್ದಾರೆ.

‘ಭಾರತದ ಆರ್ಥಿಕ ಪ್ರಗತಿ ಮತ್ತು ಅಭೂತಪೂರ್ವ ಬೆಳವಣಿಗೆಗೆ ಸಾಕ್ಷಿಯಾಗಿರುವುದು ತೃಪ್ತಿ ನೀಡಿದೆ. ದೇಶದ ಪರಿವರ್ತನೆಯ ಈ ಯುಗದಲ್ಲಿ ಕರ್ತವ್ಯ ನಿರ್ವಹಿಸಿರುವುದು ನಿಜಕ್ಕೂ ಗೌರವ’ ಎಂದಿದ್ದಾರೆ.

‘ರಾಜೀನಾಮೆ ಮರುಪರಿಶೀಲಿಸಲಿ’

‘ಜಗದೀಪ್ ಧನಕರ್ ಅವರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸಬೇಕು ಮತ್ತು ರಾಜೀನಾಮೆ ವಾಪಸ್ ಪಡೆಯುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಧನಕರ್ ಅವರ ಮನವೊಲಿಸಬೇಕು’ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

2022ರ ಆಗಸ್ಟ್ನಲ್ಲಿ ಅಧಿಕಾರ ವಹಿಸಿಕೊಂಡಿದ್ದ ಧನಕರ್ ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜೀನಾಮೆ ಸಲ್ಲಿಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ

ಎರಡನೇ ಉಪ ರಾಷ್ಟ್ರಪತಿ

ಧನಕರ್ ಅವರು ಅಧಿಕಾರದಲ್ಲಿದ್ದಾಗಲೇ ರಾಜೀನಾಮೆ ನೀಡಿದ ಎರಡನೇ ಉಪ ರಾಷ್ಟ್ರಪತಿ ಎನಿಸಿದ್ದಾರೆ. ಈ ಹಿಂದೆ ವಿ.ವಿ ಗಿರಿ ಅವರು ಅಧಿಕಾರದಲ್ಲಿ
ಇದ್ದಾಗ 1969ರ ಜುಲೈ 20ರಂದು ರಾಜೀನಾಮೆ ನೀಡಿದ್ದರು. ರಾಷ್ಟ್ರಪತಿ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವರು ರಾಜೀನಾಮೆ ನಿರ್ಧಾರ ತೆಗೆದುಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.