ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪುಣೆಯಲ್ಲಿ ಪಿಎಫ್‌ಐ ಪ್ರತಿಭಟನೆ ವೇಳೆ ಕೇಳಿ ಬಂತು ಪಾಕ್‌ ಪರ ಘೋಷಣೆ: ತನಿಖೆ ಆರಂಭ

Last Updated 24 ಸೆಪ್ಟೆಂಬರ್ 2022, 12:57 IST
ಅಕ್ಷರ ಗಾತ್ರ

ಪುಣೆ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಪುಣೆಯಲ್ಲಿ ನಡೆಸಿದ ಪ್ರತಿಭಟನೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಗಳು ಕೇಳಿಬಂದಿದ್ದು, ಇದಕ್ಕೆ ಸಂಬಂಧಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಮಹಾರಾಷ್ಟ್ರದ ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.

ಈ ಕುರಿತು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ನಗರ ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ ರಾಷ್ಟ್ರವ್ಯಾಪಿಯಾಗಿ ನಡೆದ ಎನ್‌ಐಎ ಮತ್ತು ಇತರ ತನಿಖಾ ಸಂಸ್ಥೆಗಳ ದಾಳಿಗಳು ಮತ್ತು ತನ್ನ ಕಾರ್ಯಕರ್ತರ ಬಂಧನ ಖಂಡಿಸಿ ಪಿಎಫ್‌ಐ ಶುಕ್ರವಾರ ಪುಣೆ ನಗರದ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ಪ್ರತಿಭಟನೆ ಆಯೋಜಿಸಿತ್ತು. ಪ್ರತಿಭಟನೆ ವೇಳೆ ಸುಮಾರು 40 ಮಂದಿ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವರನ್ನು ವಶಕ್ಕೆ ತೆಗೆದುಕೊಂಡು ಪೊಲೀಸ್ ವಾಹನದಲ್ಲಿ ಕೂರಿಸಿದಾಗ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಗಳು ಕೇಳಿ ಬಂದಿವೆ.

ಪಾಕಿಸ್ತಾನದ ಪರ ಘೋಷಣೆಗಳ ಬಗ್ಗೆ ನಾವು ಪ್ರತಿಭಟನಾಕಾರರ ವಿಚಾರಣೆ ಮಾಡುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಕಾನೂನುಬಾಹಿರವಾಗಿ ಸಭೆಗಳನ್ನು ನಡೆಸಿದ ಕಾರಣಕ್ಕೆ ಪಿಎಫ್‌ಐ ಸದಸ್ಯರ ವಿರುದ್ಧ ನಾವು ಈಗಾಗಲೇ ಪ್ರಕರಣ ದಾಖಲಿಸಿದ್ದೇವೆ. ಘೋಷಣೆಗೆ ಸಂಬಂಧಪಟ್ಟಂತೆ ನಾವು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಉಪ ಪೊಲೀಸ್ ಆಯುಕ್ತ ಸಾಗರ್ ಪಾಟೀಲ್ ಹೇಳಿದ್ದಾರೆ.

ಇವುಗಳನ್ನೂ ಓದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT