ಚೆನ್ನೈ: ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ತಮ್ಮ ಸಚಿವ ಸಂಪುಟವನ್ನು ಗುರುವಾರ ವಿಸ್ತರಿಸುವ ಸಾಧ್ಯತೆಯಿದ್ದು, ರಾಜ್ಯವು 1952ರ ಬಳಿಕ ಮೊದಲ ಸಮ್ಮಿಶ್ರ ಸರ್ಕಾರಕ್ಕೆ ಸಾಕ್ಷಿಯಾಗಲಿದೆ.

ಆದಾಗಿಯೂ, ಕಳೆದ ವಾರ ನಡೆದ ಬಹುಮತ ಸಾಬೀತು ಪರೀಕ್ಷೆ ವೇಳೆ ಟಿವಿಕೆ ಸರ್ಕಾರವನ್ನು ಬೆಂಬಲಿಸಿದ ಎಐಎಡಿಎಂಕೆ ಬಂಡಾಯ ಶಾಸಕರನ್ನು ಸದ್ಯಕ್ಕೆ ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ.

ಎಐಎಡಿಎಂಕೆ ಬಂಡಾಯ ಶಾಸಕರಿಗೆ ಅವಕಾಶ ನೀಡದಂತೆ ಎಡಪಕ್ಷಗಳು ಮತ್ತು ಮೈತ್ರಿಕೂಟದ ಇತರ ಪಾಲುದಾರ ಪಕ್ಷಗಳು ಮುಖ್ಯಮಂತ್ರಿ ವಿಜಯ್ ಅವರ ಮೇಲೆ ಒತ್ತಡ ಹೇರಿವೆ ಎಂದು ಗೊತ್ತಾಗಿದೆ. ಒಂದು ವೇಳೆ ಈ ಬಂಡಾಯ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಂಡರೆ ಟಿವಿಕೆಗೆ ನೀಡಿರುವ ಬೆಂಬಲವನ್ನು ಮರು ಪರಿಶೀಲಿಸಲಾಗುವುದು ಎಂದು ಆ ಪಕ್ಷಗಳ ನಾಯಕರು ಎಚ್ಚರಿಸಿದ್ದಾರೆ.

ಸಂಪುಟಕ್ಕೆ ಸೇರಲು ಕಾಂಗ್ರೆಸ್ ಸಮ್ಮತಿ:

ಕಾಂಗ್ರೆಸ್ ಶಾಸಕರಾದ ಎಸ್. ರಾಜೇಶ್ ಕುಮಾರ್ ಮತ್ತು ಪಿ. ವಿಶ್ವನಾಥನ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾಹಿತಿ ನೀಡಿದ್ದಾರೆ.

‘59 ವರ್ಷಗಳ ಬಳಿಕ ಕಾಂಗ್ರೆಸ್ ತಮಿಳುನಾಡು ಸಚಿವ ಸಂಪುಟ ಸೇರುತ್ತಿರುವುದು ಐತಿಹಾಸಿಕ ಸಂದರ್ಭ’ ಎಂದು ಅವರು ಬಣ್ಣಿಸಿದ್ದಾರೆ.

ಐವರು ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಟಿವಿಕೆ ಸರ್ಕಾರಕ್ಕೆ ಬೆಂಬಲ ನೀಡುವ ಮೂಲಕ ಡಿಎಂಕೆ ನೇತೃತ್ವದ ಮೈತ್ರಿಕೂಟದಿಂದ ಹೊರನಡೆದಿತ್ತು.

ಭಾಷಾವಾರು ಪ್ರಾಂತ್ಯಗಳ ಆಧಾರದ ಮೇಲೆ ರಾಜ್ಯಗಳ ಪುನರ್ರಚನೆ ಆದ ನಂತರ ತಮಿಳುನಾಡಿನಲ್ಲಿ ರಚನೆಯಾದ ಮೊದಲ ಸಮ್ಮಿಶ್ರ ಸರ್ಕಾರ ಇದಾಗಲಿದೆ. 1952ರಲ್ಲಿ ಸಂಯೋಜಿತ ಮದ್ರಾಸ್ ರಾಜ್ಯದಲ್ಲಿ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ರಚಿಸಿತ್ತು.

ವಿಸಿಕೆ, ಐಯುಎಂಎಲ್ಗೆ ಆಹ್ವಾನ:

ತಮಿಳುನಾಡಿನ ಆಡಳಿತಾರೂಢ ಟಿವಿಕೆ ಸರ್ಕಾರದ ಸಂಪುಟದಲ್ಲಿ ಭಾಗಿಯಾಗುವಂತೆ ವಿಸಿಕೆ ಮತ್ತು ಐಯುಎಂಎಲ್ ಪಕ್ಷಗಳಿಗೆ ತಮಿಳುನಾಡಿನ ಲೋಕೋಪಯೋಗಿ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ ಆಧವ್ ಅರ್ಜುನ್ ಬುಧವಾರ ಆಹ್ವಾನಿಸಿದ್ದಾರೆ.

ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಅವರು ಒಂದು ಕುಟುಂಬದ ರೀತಿ ಸಂಪುಟ ಕಾರ್ಯ ನಿರ್ವಹಿಸಬೇಕು ಎಂದು ಬಯಸಿದ್ದಾರೆ ಎಂದಿರುವ ಅವರು, ‘ಎಡಪಕ್ಷಗಳನ್ನೂ ಸಂಪುಟದಲ್ಲಿ ಸೇರಿಸಿಕೊಳ್ಳುವ ಇಚ್ಛೆಯನ್ನು ಮುಖ್ಯಮಂತ್ರಿ ಹೊಂದಿದ್ದಾರೆ’ ಎಂದಿದ್ದಾರೆ.

ಟಿವಿಕೆ ಸರ್ಕಾರ ರಚಿಸದಂತೆ ಮಾಡಲು ಮತ್ತು ತಾವು ಅಧಿಕಾರಕ್ಕೇರಲು ಡಿಎಂಕೆ ಮತ್ತು ಎಐಎಡಿಎಂಕೆ ಒಂದಾಗಲು ಯತ್ನಿಸಿದ್ದವು ಎಂದು ಅವರು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.