ಚೆನ್ನೈ: ಮಹಿಳೆಯರಿಗೆ ರಕ್ಷಣೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಟ, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ್ ತಮಿಳುನಾಡು ರಾಜ್ಯಪಾಲ ಆರ್.ಎನ್ ರವಿ ಅವರಿಗೆ ಮನವಿ ಮಾಡಿದ್ದಾರೆ.

ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆಗೆ ರಾಜ್ಯದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ರಾಜ ಭವನಕ್ಕೆ ಭೇಟಿ ನೀಡಿದ ವಿಜಯ್, ರಾಜ್ಯಪಾಲ ರವಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಸಮಸ್ಯೆ ಕುರಿತು ರಾಜ ಭವನಕ್ಕೆ ಭೇಟಿ ನೀಡಿರುವ ವಿಜಯ್ ಅವರ ನಡೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ, ರಾಜ್ಯದ ಮಹಿಳೆಯರಿಗೆ ಎಲ್ಲಾ ಸ್ಥಳಗಳಲ್ಲೂ ರಕ್ಷಣೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ. ಇದರೊಂದಿಗೆ ಫೆಂಜಲ್ ಚಂಡಮಾರುತದ ಪರಿಹಾರ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆಗೊಳಿಸಲು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಲಾಗಿದೆ ಎಂದು ಟಿವಿಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಎನ್. ಆನಂದ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.