ಚೆನ್ನೈ: ಹೊಸದಾಗಿ ಆಯ್ಕೆಯಾದ ಪಕ್ಷದ ಶಾಸಕರೊಂದಿಗೆ ವಿಜಯ್ ಅವರು ಇಂದು(ಮಂಗಳವಾರ) ಮೊದಲ ಸಭೆ ನಡೆಸಿದ್ದಾರೆ.

ಟಿವಿಕೆ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮತ್ತು ಸರ್ಕಾರ ರಚಿಸುವ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಯಿತು ಎಂದು ಟಿವಿಕೆ ನಾಯಕ ನಂಜಿಲ್ಲ ಸಂಪತ್ ತಿಳಿಸಿದ್ದಾರೆ.

ಕಳೆದ ತಿಂಗಳು ನಡೆದ ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದಿರುವ ವಿಜಯ್ ನೇತೃತ್ವದ ಟಿವಿಕೆ, ಸರ್ಕಾರ ರಚನೆಗೆ ಮುಂದಾಗಿದೆ.

ಸರಳ ಬಹುಮತಕ್ಕೆ ಇನ್ನೂ 10 ಶಾಸಕರ ಕೊರತೆಯಿದ್ದು, ಇದನ್ನು ಟಿವಿಕೆ ಹೇಗೆ ಸರಿದೂಗಿಸಲಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಂಪತ್, ‘ಪಕ್ಷದ ನಾಯಕರು ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದೇವೆ’ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ, ವಿಜಯ್ ಅವರು ತಮ್ಮ ಸೈದ್ಧಾಂತಿಕ ನಾಯಕರಾದ ಪೆರಿಯಾರ್ ಇ.ವಿ. ರಾಮಸ್ವಾಮಿ, ಬಿ.ಆರ್. ಅಂಬೇಡ್ಕರ್, ಕೆ. ಕಾಮರಾಜ್, ವೇಲು ನಾಚಿಯಾರ್ ಮತ್ತು ಅಂಜಲೈ ಅಮ್ಮಾಳ್ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು.

ವಿಜಯ್ ನೇತೃತ್ವದ ಟಿವಿಕೆ 108 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೆ, ಡಿಎಂಕೆ 59 ಮತ್ತು ಎಐಎಡಿಎಂಕೆ 47 ಸ್ಥಾನಗಳನ್ನು ಪಡೆದುಕೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.