ಚುನಾವಣೆ ದಿನಾಂಕ ಘೋಷಣೆ
ತಮಿಳುನಾಡು ಮಾತ್ರವಲ್ಲದೆ, ಕೇರಳ, ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ಪುದುಚೇರಿ ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆಗೆ ಚುನಾವಣಾ ಆಯೋಗವು ಇಂದು ದಿನಾಂಕ ಘೋಷಣೆ ಮಾಡಿದೆ. ಕೇರಳ, ಪುದುಚೇರಿಯಲ್ಲಿ ಏಪ್ರಿಲ್ 9ರಂದು ಹಾಗೂ ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಹಾಗೂ ಏಪ್ರಿಲ್ 29ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಎಲ್ಲ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶವು ಮೇ 4ರಂದು ಹೊರಬೀಳಲಿದೆ.