ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನ ಗೆದ್ದಿರುವ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಸರ್ಕಾರ ರಚನೆಗೆ ಇತರೆ ಪಕ್ಷಗಳ ಜೊತೆಗೆ ಮೈತ್ರಿಗೆ ಕೈಚಾಚುತ್ತಿದೆ. 234 ಸದಸ್ಯ ಬಲದ ವಿಧಾನಸಭೆಯಲ್ಲಿ ಸರ್ಕಾರ ರಚನೆಗೆ ಟಿವಿಕೆಗೆ 118 ಸ್ಥಾನಗಳ ಅವಶ್ಯಕತೆ ಇದೆ.

ಹೀಗಾಗಿ, ಬೆಂಬಲ ಕೋರಿ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಮುಖ್ಯಸ್ಥ ಥೋಲ್ ತಿರುಮಾವಲನ್ ಅವರಿಗೆ ವಿಜಯ್ ಪತ್ರ ಬರೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಸಿಕೆ ನಾಯಕರು, ವಿಜಯ್ ಮನವಿ ಬಗ್ಗೆ ಇನ್ನಷ್ಟೇ ನಿರ್ಧಾರ ಕೈಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

ಡಿಎಂಕೆಯ ಇತರೆ ಮಿತ್ರಪಕ್ಷಗಳಾದ ಕಾಂಗ್ರೆಸ್, ಸಿಪಿಐ ಮತ್ತು ಸಿಪಿಎಂ ಅವರ ಬೆಂಬಲವನ್ನೂ ವಿಜಯ್ ಕೋರಿದ್ದಾರೆ. ಐದು ಸ್ಥಾನಗಳನ್ನು ಹೊಂದಿರುವ ಕಾಂಗ್ರೆಸ್, ವಿಜಯ್ ಸರ್ಕಾರ ರಚಿಸಿದರೆ ಅವರನ್ನು ಬೆಂಬಲಿಸಲು ಈಗಾಗಲೇ ನಿರ್ಧರಿಸಿದೆ ಎಂದು ನಾಯಕರೊಬ್ಬರು ದೃಢಪಡಿಸಿದ್ದಾರೆ.

ವಿಸಿಕೆ (2), ಸಿಪಿಐ (2) ಮತ್ತು ಸಿಪಿಎಂ (2) ಸಹ ವಿಜಯ್ ಅವರನ್ನು ಬೆಂಬಲಿಸಲು ಒಪ್ಪಿದರೆ, ಟಿವಿಕೆ 119 ಶಾಸಕರ ಬೆಂಬಲದೊಂದಿಗೆ ಸರಳ ಬಹುಮತ ಪಡೆಯಲಿದೆ.

ಕಳೆದ ತಿಂಗಳು ನಡೆದ ರಾಜ್ಯ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಟಿವಿಕೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ವಿಜಯ್ ಅವರ ಟಿವಿಕೆ ಪಕ್ಷ 108 ಸ್ಥಾನಗಳನ್ನು ಗೆದ್ದಿದ್ದು, ಸರಳ ಬಹುಮತದೊಂದಿಗೆ ಸರ್ಕಾರ ರಚಿಸಲು ಅವರಿಗೆ 10 ಶಾಸಕರ ಬೆಂಬಲ ಬೇಕು. ಕಾಂಗ್ರೆಸ್ ಐದು ಸ್ಥಾನಗಳನ್ನು ಗೆದ್ದಿದ್ದರೆ, ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ನಾಲ್ಕು ಸ್ಥಾನಗಳನ್ನು ಗೆದ್ದಿದೆ. ಸಿಪಿಐ ಮತ್ತು ಸಿಪಿಐ-ಎಂ ತಲಾ ಎರಡು ಸ್ಥಾನಗಳನ್ನು ಹೊಂದಿವೆ. ನಿರ್ಗಮಿತ ಆಡಳಿತ ಪಕ್ಷವ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) 59 ಸ್ಥಾನಗಳನ್ನು ಗೆದ್ದಿದ್ದರೆ, ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) 47 ಸ್ಥಾನಗಳನ್ನು ಗೆದ್ದಿದೆ.

ವಿಜಯ್ ಸ್ಪರ್ಧಿಸಿದ್ದ ತಿರುಚ್ಚಿ ಪೂರ್ವ ಮತ್ತು ಪೆರಂಬೂರು ಎರಡರಲ್ಲೂ ಗೆದ್ದಿದ್ದರು. ಮೂಲಗಳು ಹೇಳುವಂತೆ ಅವರು ತಿರುಚ್ಚಿ ಪೂರ್ವವನ್ನು ಬಿಟ್ಟುಕೊಡುವ ಸಾಧ್ಯತೆ ಇದೆ. ಎರಡನೆಯದನ್ನು ಉಳಿಸಿಕೊಳ್ಳುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.