ಚೆನ್ನೈ: ವಿಧಾನಸಭಾ ಚುನಾವಣೆಯಲ್ಲಿ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ತಮಿಳು ನಟ ಮತ್ತು ರಾಜಕಾರಣಿ ವಿಜಯ್ ಮಂಗಳವಾರ ಸಂದರ್ಶನ ಪ್ರಕ್ರಿಯೆ ಆರಂಭಿಸಿದ್ದಾರೆ.

ರಾಜ್ಯದ ಎಲ್ಲಾ 234 ವಿಧಾನಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪಕ್ಷದ ಸಂಸ್ಥಾಪಕರಾದ ವಿಜಯ್ ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೊದಲ ಹಂತದ ಚುನಾವಣೆಯಲ್ಲಿ ಸ್ಪರ್ಧಿಸುವ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಸಂದರ್ಶನ ನಡೆಸುತ್ತಿದ್ದಾರೆ.

ಇಲ್ಲಿನ ಪನಯೂರಿನಲ್ಲಿರುವ ಟಿವಿಕೆ ಪಕ್ಷದ ಕೇಂದ್ರ ಕಚೇರಿಗೆ ಬಂದಿರುವ ವಿಜಯ್, ಇಂದು 60 ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಟಿವಿಕೆ ಪಕ್ಷದಿಂದ ಸ್ಪರ್ಧಿಸಲು ಆಸಕ್ತಿ ವ್ಯಕ್ತಪಡಿಸಿ 4,200ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು ಪ್ರಮುಖ ಕ್ಷೇತ್ರಗಳನ್ನು ಪಕ್ಷದ ಹಿರಿಯ ನಾಯಕರಿಗೆ ನೀಡುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪಕ್ಷದ ಹಿರಿಯ ನಾಯಕರಾದ ಬಿ.ಅನಂದ್, ಆದವ್ ಆರ್ಜುನ್, ಆರುಣ್ ರಾಜ್ ಅವರು ಕ್ರಮವಾಗಿ ಟಿ.ನಗರ, ವಿಲ್ಲಿವಾಕ್ಕಂ ಮತ್ತು ತಿರುಚಿಗೋಡ್ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ.

2024ರ ಫೆಬ್ರವರಿ 2ರಂದು ಸ್ಥಾಪಿತವಾದ ಟಿವಿಕೆ ಪಕ್ಷ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಎದುರಿಸುತ್ತಿದ್ದು ಆಡಳಿತದಲ್ಲಿರುವ ಡಿಎಂಕೆಗೆ ಪರ್ಯಾಯ ಶಕ್ತಿಯಾಗಿ ಬೆಳೆಯಲು ಪ್ರಯತ್ನಿಸುತ್ತಿದೆ.

ಟಿವಿಕೆ ಜೊತೆ ಮೈತ್ರಿ ಮಾಡಿಕೊಳ್ಳುವ ಪಕ್ಷಗಳಿಗೆ ಅಧಿಕಾರ ಹಂಚಿಕೆ ಮಾಡುವ ಹೇಳಿಕೆ ನೀಡಿದ್ದರೂ, ಇದುವರೆಗೆ ಯಾವುದೇ ರಾಜಕೀಯ ಪಕ್ಷ ಟಿವಿಕೆ ಜೊತೆ ಕೈಜೋಡಿಸಿಲ್ಲ.
.ತಮಿಳುನಾಡು ಚುನಾವಣೆ: ಐದು ವಿಧಾನಸಭಾ ಕ್ಷೇತ್ರಗಳಿಗೆ ಮುಸ್ಲಿಂ ಲೀಗ್ ಬೇಡಿಕೆ.ತಮಿಳುನಾಡು ವಿಧಾನಸಭೆ ಚುನಾವಣೆ: ಮೈತ್ರಿಗೆ ಡಿಎಂಕೆ, ಕಾಂಗ್ರೆಸ್ ಮುದ್ರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.