ವಿಜಯಪುರ: ‘ಮಹಿಳಾ ಮೀಸಲಾತಿ ಹೆಸರಿನಲ್ಲಿ ಕೇಂದ್ರ ಸರ್ಕಾರ ಮೋಸದ ಮಸೂದೆ ತಂದಿತ್ತು, ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಮರು ವಿಂಗಡನೆ ಬೇರೆ- ಬೇರೆ ವಿಷಯವಾಗಿದ್ದರೂ ಎರಡನ್ನು ಒಟ್ಟಿಗೆ ತರಲಾಗಿತ್ತು’ ಎಂದು ಕಾಂಗ್ರೆಸ್ ನಾಯಕಿ ಕಾಂತಾ ನಾಯಕ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಂಚ ರಾಜ್ಯ ಚುನಾವಣೆಯಲ್ಲಿ ರಾಜಕೀಯ ಲಾಭಕ್ಕಾಗಿ ಬಿಜೆಪಿ ಸರ್ಕಾರ ಏಕಾಏಕಿ ಕ್ಷೇತ್ರ ಮರು ವಿಂಗಡನೆ ಮಸೂದೆಯೊಂದಿಗೆ ಮಾಹಿಳಾ ಮೀಸಲಾತಿ ಬಿಲ್ ತಂದಿತ್ತು, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಮರು ವಿಂಗಡನೆ ಮಸೂದೆಗಳನ್ನು ಒಟ್ಟಿಗೆ ತರಲು ಪ್ರಯತ್ನಿಸಿರುವುದನ್ನು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ವಿರೋಧಿಸಿವೆ’ ಎಂದರು.

‘ಕ್ಷೇತ್ರ ಮರು ವಿಂಗಡನೆ ಮಸೂದೆಯೊಂದಿಗೆ ಮಹಿಳಾ ಮೀಸಲಾತಿ ಮಸೂದೆ ತಂದು ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡಲು ಮುಂದಾಗಿತ್ತು. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಮಹಿಳಾ ಮೀಸಲಾತಿಯನ್ನು 543 ಕ್ಷೇತ್ರಗಳಿಗೆ ಈಗಲೇ ಅನುಷ್ಠಾನ ಮಾಡಿ ಎಂದು ಹೇಳಿದ್ದರು. ಜತೆಗೆ 50ರಷ್ಟು ಮೀಸಲಾತಿಯನ್ನು ಮಹಿಳೆಯರಿಗೆ ಕೊಟ್ಟರೂ ಕಾಂಗ್ರೆಸ್ ಸ್ವಾಗತ ಮಾಡಲಿದೆ’ ಎಂದು ಹೇಳಿದರು.

‘ಮಹಿಳೆಯರ ಬಗ್ಗೆ ಕಾಳಜಿಯ ಮಾತನಾಡುವ ಪ್ರಧಾನಿ ಮೋದಿ ಹತ್ರಾಸ್ ಪ್ರಕರಣ, ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಮಹಿಳಾ ಕ್ರೀಡಾಪಟುಗಳ ರಸ್ತೆಗಿಳಿದು ಹೋರಾಡಿದಾಗ ಯಾಕೆ ಸುಮ್ಮನಿದ್ದರು’ ಎಂದೂ ಪ್ರಶ್ನಿಸಿದರು.

ರುಕ್ಸಾನಾ ಉಸ್ತಾದ, ಆರತಿ ಶಹಾಪುರ, ರಮೇಜಾ ನಧಾಫ್, ಮಹಾದೇವಿ ಗೋಕಾಕ, ವಿದ್ಯಾರಾಣಿ ತುಂಗಳ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-26-1246404161

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.