ನವದೆಹಲಿ (ಪಿಟಿಐ): 2047ರ ಹೊತ್ತಿಗೆ ಪ್ರಧಾನಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ ರೂಪಿಸುವ ಗುರಿ ಮುಟ್ಟಲು ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ದೇಶದಾದ್ಯಂತ ಜನರನ್ನು ಒಗ್ಗೂಡಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಸೋಮವಾರ ಕರೆ ನೀಡಿದ್ದಾರೆ.

ಬಿಜೆಪಿಯ 47ನೇ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಬಿಜೆಪಿಯನ್ನು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವನ್ನಾಗಿ ಕಟ್ಟುವಲ್ಲಿ ‘ತ್ಯಾಗ ಮತ್ತು ಬಲಿದಾನ’ ನೀಡಿದ ನಾಯಕರು ಮತ್ತು ಕಾರ್ಯಕರ್ತರ ಪ್ರೇರಣೆ ಪಡೆದು ಪಕ್ಷವನ್ನು ಇನ್ನಷ್ಟು ಎತ್ತರಕ್ಕೆ ಬೆಳಸಬೇಕಿದೆ’ ಎಂದು ಹೇಳಿದರು.

‘2047ರ ವೇಳೆಗೆ ವಿಕಸಿತ ಭಾರತ ರೂಪಿಸಲು ಮತ್ತು ಪಂಚಾಯಿತಿಯಿಂದ ಸಂಸತ್ತಿನವರೆಗೂ ‘ಭಗವಾಧ್ವಜ’ (ಕೇಸರಿ) ಹಾರಿಸುವ ಕನಸು ಈಡೇರಿಸಲು ಮುಂದಡಿ ಇಡಬೇಕಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-51-1204299278

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.