ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾಗೆ ಭಾರತದ ರಾಯಭಾರಿಯಾಗಿ ವಿನಯ್ ಕುಮಾರ್ ನೇಮಕ

Published 19 ಮಾರ್ಚ್ 2024, 6:54 IST
Last Updated 19 ಮಾರ್ಚ್ 2024, 6:54 IST
ಅಕ್ಷರ ಗಾತ್ರ

ನವದೆಹಲಿ: ರಷ್ಯಾಗೆ ಭಾರತದ ರಾಯಭಾರಿಯಾಗಿ ವಿನಯ್‌ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ ಪ್ರಕಟಣೆ ಹೊರಡಿಸಿದೆ.

ಪ್ರಸ್ತುತ ವಿನಯ್‌ ಕುಮಾರ್‌ ಅವರು ಮ್ಯಾನ್ಮಾರ್‌ನಲ್ಲಿ ಭಾರತದ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಶೀಘ್ರದಲ್ಲಿಯೇ ರಷ್ಯಾದ ಭಾರತ ರಾಯಭಾರಿಯಾಗಿ ಅಧಿಕಾರವಹಿಸಿಕೊಳ್ಳಲಿದ್ದಾರೆ ಎಂದು ಸಚಿವಾಲಯ ಹೇಳಿದೆ.

ಈ ಹಿಂದೆ ರಷ್ಯಾದಲ್ಲಿ ಭಾರತದ ರಾಯಭಾರಿಯಾಗಿ ಪವನ್‌ ಕಪೂರ್ ಅವರು ಕಾರ್ಯನಿರ್ವಹಿಸುತ್ತಿದ್ದರು.

ಭಾರತೀಯ ವಿದೇಶಾಂಗ ಸೇವೆಯ 1992 ರ ಬ್ಯಾಚ್‌ನ ಅಧಿಕಾರಿಯಾಗಿರುವ ವಿನಯ್‌ ಕುಮಾರ್, 2021ರ ಅಂತ್ಯದಿಂದ ಮ್ಯಾನ್ಮಾರ್‌ಗೆ ರಾಯಭಾರಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT