ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿನೇಶಾ ಫೋಗಟ್‌ ‘ಭಾರತೀಯರ ಹೆಮ್ಮೆ’: ಉ.ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್

Published : 7 ಆಗಸ್ಟ್ 2024, 10:50 IST
Last Updated : 7 ಆಗಸ್ಟ್ 2024, 10:50 IST
ಫಾಲೋ ಮಾಡಿ
Comments

ಲಖನೌ: ವಿನೇಶಾ ಫೋಗಟ್‌ ಅವರು ‘ಭಾರತೀಯರ ಹೆಮ್ಮೆ’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮೆಚ್ಚುಗೆಯ ಮಾತುಗಳಾನ್ನಾಡಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ‘ಎಕ್ಸ್‌‘ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು. 'ನೀವು ಭಾರತೀಯರ ಹೆಮ್ಮೆ, ವಿಜಯಶಾಲಿ ಮತ್ತು ಚಾಂಪಿಯನ್‌. ನೀವು (ವಿನೇಶಾ) ನಿರಾಶೆಗೊಳ್ಳಬೇಡಿ. ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ನಿಮ್ಮ ಅತ್ಯುತ್ತಮ ಪ್ರದರ್ಶನವು ಕುಸ್ತಿಯಲ್ಲಿ ಮೊದಲ ಬಾರಿಗೆ ಮಹಿಳಾ ಕುಸ್ತಿಪಟು ಒಬ್ಬರು ಫೈನಲ್‌ ಅನ್ನು ಪ್ರವೇಶಿಸುವುದರ ಮೂಲಕ ಇತಿಹಾಸ ನಿರ್ಮಿಸಿದ್ದೀರಿ. ನೀವು ಮತ್ತಷ್ಟು ಬಲಿಷ್ಟರಾಗಿ ತಯ್ನಾಡಿಗೆ ಮರುಳುತ್ತೀರಾ ಎಂಬ ವಿಶ್ವಾಸವಿದೆ' ಎಂದು ತಿಳಿಸಿದ್ದಾರೆ.

ಮಹಿಳೆಯರ 50 ಕೆ.ಜಿ ಕುಸ್ತಿ ವಿಭಾಗದಲ್ಲಿ ಸ್ಪರ್ಧಿಸಿದ್ದ ವಿನೇಶಾ ಅವರನ್ನು 100 ಗ್ರಾಂ ಹೆಚ್ಚು ತೂಕ ಹೊಂದಿದ್ದಕ್ಕೆ ಒಲಿಂಪಿಕ್ಸ್ ಸಂಸ್ಥೆ ಅನರ್ಹಗೊಳಿಸಿದೆ.

ಭಾರತದ ಒಲಿಂಪಿಕ್ಸ್ ಸಂಸ್ಥೆಯು (ಐಒಸಿ) ವಿನೇಶಾ ಅನರ್ಹತೆಯನ್ನು ಖಚಿತಪಡಿಸಿದ್ದು, ಆಕೆಯ ಖಾಸಗಿತನವನ್ನು ಗೌರವಿಸುವಂತೆ ಒತ್ತಾಯಿಸಿದೆ.

ಮಂಗಳವಾರ ನಡೆದ 50 ಕೆ.ಜಿ ವಿಭಾಗದ ಮಹಿಳೆಯರ ಕುಸ್ತಿಯ ಸೆಮಿಫೈನಲ್‌ನಲ್ಲಿ ವಿನೇಶಾ 5–0ಯಿಂದ ಕ್ಯೂಬಾದ ಯುಸೇನೆಯಲಿಸ್ ಗುಜ್ಮನ್ ಲೊಪೇಜ್ ವಿರುದ್ಧ ಗೆದ್ದಿದ್ದರು. ಇಂದು ರಾತ್ರಿ ನಡೆಯುವ ಫೈನಲ್‌ ಪಂದ್ಯದಲ್ಲಿ ಅಮೆರಿಕದ ಸೆರಾ ಹಿಲ್ದಿಬ್ರೇಟ್‌ ಅವರನ್ನು ವಿನೇಶಾ ಎದುರಿಸಬೇಕಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT