ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನವಮಿ ಹಿಂಸಾಚಾರ: ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ ಆಯೋಗ

Published 20 ಏಪ್ರಿಲ್ 2024, 2:33 IST
Last Updated 20 ಏಪ್ರಿಲ್ 2024, 2:33 IST
ಅಕ್ಷರ ಗಾತ್ರ

ಕೋಲ್ಕತ್ತ: ರಾಮನವಮಿ ಸಂದರ್ಭ ಹಿಂಸಾಚಾರ ತಡೆಯಲು ವಿಫಲರಾದ ಆರೋಪದ ಮೇಲೆ ಚುನಾವಣಾ ಆಯೋಗವು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಎರಡು ಪೊಲೀಸ್ ಠಾಣೆಯ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

ಸೂಚನೆಗಳ ಹೊರತಾಗಿಯೂ ಧಾರ್ಮಿಕ ಹಿಂಸಾಚಾರ ನಿಲ್ಲಿಸಲು ಶಕ್ತಿಪುರ ಮತ್ತು ಬೆಲ್ದಂಗ ಪೊಲೀಸ್ ಠಾಣೆಯ ಅಧಿಕಾರಿಗಳು ವಿಫಲವಾಗಿದ್ದಾರೆ ಎಂದು ಆಯೋಗ ತಿಳಿಸಿದೆ.

‘ಚುನಾವಣಾ ಸಂಬಂಧಿತ ಯಾವುದೇ ಕೆಲಸ ನಿರ್ವಹಿಸಲು ಇವರಿಗೆ ಸಾಧ್ಯವಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಈ ಇಬ್ಬರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಬೇಕು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇವರಿಬ್ಬರ ಸ್ಥಾನಕ್ಕೆ ಬದಲಿ ಹೆಸರನ್ನು ಸೂಚಿಸುವಂತೆಯೂ ಆಯೋಗ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT