ಅಗರ್ತಲ: ತ್ರಿಪುರಾದ ಹಲವೆಡೆ ಆಡಳಿತಾರೂಢ ಬಿಜೆಪಿ ಮತ್ತು ಸಿಪಿಐ(ಎಂ) ಕಾರ್ಯಕರ್ತರ ನಡುವೆ ಬುಧವಾರ ಹಿಂಸಾತ್ಮಕ ಘರ್ಷಣೆ ನಡೆದಿದೆ.

ಗೋಮತಿ ಜಿಲ್ಲೆಯ ಉದಯ್‌ಪುರದಲ್ಲಿ ಸಿಪಿಐ(ಎಂ)ನ ಯುವ ಘಟಕ ‘ಡೆಮಾಕ್ರಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾ (ಡಿವೈಎಫ್‌ಐ)’ ಮೆರವಣಿಗೆ ಹಮ್ಮಿಕೊಂಡಿತ್ತು. ಮೆರವಣಿಗೆ ವೇಳೆ ಕೆಲವು ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಓದಿ:ತ್ರಿಪುರ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಗೆಲ್ಲಲಿದೆ: ಮಮತಾ ಬ್ಯಾನರ್ಜಿ

ಡಿವೈಎಫ್‌ಐ ಮೆರವಣಿಗೆ ವೇಳೆ ಸಮೀಪದಲ್ಲೇ ಇದ್ದ ಬಿಜೆಪಿ ಕಾರ್ಯಕರ್ತರ ಗುಂಪು ದಾಳಿ ನಡೆಸಿತ್ತು. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಆದರೆ ಅವರು ಯಾವ ರಾಜಕೀಯ ಪಕ್ಷಕ್ಕೆ ಸೇರಿದವರು ಎಂಬುದು ಗೊತ್ತಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ

ಅಗರ್ತಲ, ವೈಶಾಲ್‌ಗಡ, ಕಥಾಲಿಯಾಗಳಲ್ಲಿ ಸಿಪಿಐ(ಎಂ) ಕಚೇರಿಗಳನ್ನು ಧ್ವಂಸ ಮಾಡಲಾಗಿದ್ದು, ಬೆಂಕಿ ಹಚ್ಚಲಾಗಿದೆ ಎಂದು ಮೂಲಗಳು ಹೇಳಿವೆ.

ತ್ರಿಪುರಾ ಮಾಜಿ ಮುಖ್ಯಮಂತ್ರಿ ಮಣಿಕ್ ಸರ್ಕಾರ್ ಧನ್‌ಪುರಕ್ಕೆ ತೆರಳುತ್ತಿದ್ದಾಗ ಅವರನ್ನು ತಡೆದ ವಿಚಾರವಾಗಿ ಸೋಮವಾರ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿತ್ತು. ಘಟನೆಯಲ್ಲಿ ಗಾಯಗೊಂಡಿದ್ದ ಉದಯ್‌ಪುರದ ಬಿಜೆಪಿ ಕಾರ್ಯಕರ್ತನ ಸ್ಥಿತಿ ತೀರಾ ಗಂಭೀರವಾಗಿದ್ದು, ಜಿ.ಬಿ.ಪಂತ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನಾ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಕಷಿ ಸಚಿವ ಪ್ರಾಣ್‌ಜಿತ್ ಸಿಂಗ್ ರಾಯ್ ಸ್ಥಳಕ್ಕೆ ಧಾವಿಸಿದ್ದು ಪರಿಸ್ಥಿತಿ ಅವಲೋಕಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.