ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಮ್ಮ ಕ್ಷೇತ್ರಗಳಿಗೆ ನಿತ್ಯವೂ ಹೋಗಿ: ಎಎಪಿ ಶಾಸಕರಿಗೆ ಕೇಜ್ರಿವಾಲ್ ಸಂದೇಶ

Published 4 ಏಪ್ರಿಲ್ 2024, 9:51 IST
Last Updated 4 ಏಪ್ರಿಲ್ 2024, 9:51 IST
ಅಕ್ಷರ ಗಾತ್ರ

ನವದೆಹಲಿ: ತಿಹಾರ್‌ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು, 'ಪ್ರತಿ ದಿನವೂ ನಿಮ್ಮ ವಿಧಾನಸಭೆ ಕ್ಷೇತ್ರಗಳಿಗೆ ಭೇಟಿ ನೀಡಿ. ಜನರಿಗೆ ಯಾವ ಸಮಸ್ಯೆಯೂ ಇಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಿ' ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ಶಾಸಕರಿಗೆ ಕರೆ ನೀಡಿದ್ದಾರೆ.

ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ ಅರವಿಂದ ಕೇಜ್ರಿವಾಲ್‌ ನೀಡಿರುವ ಸಂದೇಶವನ್ನು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಗುರುವಾರ ಹಂಚಿಕೊಂಡಿದ್ದಾರೆ.

ತಾವು ಜೈಲಿನಲ್ಲಿದ್ದರೂ, ತಮ್ಮ ಕುಟುಂಬದಂತಿರುವ ದೆಹಲಿಯ 2 ಕೋಟಿ ಜನರಿಗೆ ಸಮಸ್ಯೆ ಆಗಬಾರದು ಎಂಬುದೇ ಅವರ ಬಯಕೆಯಾಗಿದೆ ಎಂದು ಸುನೀತಾ ಹೇಳಿದ್ದಾರೆ.

'ಅಧಿಕೃತ ಕರ್ತವ್ಯಗಳ ಹೊರತಾಗಿಯೂ ನಾವು ಜನರ ಸಮಸ್ಯೆಗಳನ್ನು ಪರಿಹರಿಸಬೇಕಿದೆ' ಎಂದು ಸಿಎಂ ಹೇಳಿರುವುದಾಗಿ ತಿಳಿಸಿದ್ದಾರೆ.

ದೆಹಲಿ ಸರ್ಕಾರ ಸದ್ಯ ಹಿಂಪಡೆದಿರುವ 'ಅಬಕಾರಿ ನೀತಿ' ಜಾರಿ ವೇಳೆ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಸಂಬಂಧ ಕೇಜ್ರಿವಾಲ್‌ ಅವರನ್ನು ಜಾರಿ ನಿರ್ದೇಶನಲಾಯದ ಅಧಿಕಾರಿಗಳು ಬಂಧಿಸಿದ್ದಾರೆ. ಅವರನ್ನು ಏಪ್ರಿಲ್‌ 15ರವರೆಗೆ ನ್ಯಾಯಾಂಗದ ವಶಕ್ಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT