ಬುಧವಾರ, 6 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬದರಿನಾಥ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಾಷ್ಟ್ರಪತಿ ಮುರ್ಮು

Published 8 ನವೆಂಬರ್ 2023, 11:14 IST
Last Updated 8 ನವೆಂಬರ್ 2023, 11:14 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಉತ್ತರಾಖಂಡದ ಬದರಿನಾಥ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಬದರಿನಾಥ ದೇವಾಲಯಕ್ಕೆ ಭೇಟಿ ನೀಡಿದ ಫೋಟೊಗಳನ್ನು ರಾಷ್ಟ್ರಪತಿ ಭವನದ ಕಚೇರಿ ಹಂಚಿಕೊಂಡಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಹಾಗೂ ರಾಜ್ಯಪಾಲ ಗುರ್ಮಿತ್ ಸಿಂಗ್ ಅವರು ಬದರಿನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ರಾಷ್ಟ್ರಪತಿ ದ್ರೌ‍ಪತಿ ಮುರ್ಮ ಅವರು ಮಂಗಳವಾರದಿಂದ ಮೂರು ದಿನಗಳ ಕಾಲ ಉತ್ತರಾಖಂಡ ಪ್ರವಾಸ ಕೈಗೊಂಡಿದ್ದಾರೆ. ಹೇಮಾವತಿ ನಂದನ್ ಬಹುಗುಣ ಗರ್ವಾಲ್ ವಿಶ್ವವಿದ್ಯಾಲಯದ 11 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಇಂದು ಭಾಗಿಯಾಗಲಿದ್ದಾರೆ. ರಾಜ್ಯ ಸಂಸ್ಥಾಪನಾ ದಿನವನ್ನು ಆಚರಿಸಲು ನಾಳೆ ಡೆಹ್ರಾಡೂನ್‌ಗೆ ತೆರಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT