ನವದೆಹಲಿ: ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂಬತ್ತು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಭಾನುವಾರ (ಏ.3) ಬೆಳಿಗ್ಗೆ 4 ಗಂಟೆ ಸುಮಾರಿಗೆ ಕಟ್ಟಡದ ಎರಡನೇ ಅಂತಸ್ತಿನಲ್ಲಿ ಕಾಣಿಸಿಕೊಂಡ ಬೆಂಕಿ, ನೋಡನೋಡುತ್ತಿದ್ದಂತೆಯೇ ಮೂರು ಮತ್ತು ನಾಲ್ಕನೇ ಮಹಡಿಗಳಿಗೂ ವ್ಯಾಪಿಸಿದೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ 14 ಅಗ್ನಿಶಾಮಕ ವಾಹನಗಳು ಧಾವಿಸಿ, ಸತತ ಎರಡು ಗಂಟೆಗಳ ಕಾಲ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದವು.

ಸದ್ಯ ಕಟ್ಟಡದಲ್ಲಿದ್ದ 12ರಿಂದ 15 ಹೆಚ್ಚು ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಗುರು ತೇಗ್ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಬೆಂಕಿ ನಂದಿಸಲಾಯಿತು. ಬಳಿಕ ಶೋಧ ಕಾರ್ಯ ನಡೆಸಿ ಮೃತದೇಹಗಳನ್ನು ಹೊರತೆಗೆಯಲಾಗಿದೆ’ ಎಂದು ಶಹದಾರಾ ಡಿಸಿಪಿ ರಾಜೇಂದ್ರ ಪ್ರಸಾದ್ ಮೀನಾ ತಿಳಿಸಿದ್ದಾರೆ.

ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ, ಎಸಿ ಸ್ಫೋಟಗೊಂಡಿದ್ದರಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಸ್ಥಳೀಯರೊಬ್ಬರು ಶಂಕೆ ವ್ಯಕ್ತಪಡಿಸಿದ್ದಾರೆ. ‘ಎಸಿಯಲ್ಲಿ ಸ್ಫೋಟ ಸಂಭವಿಸಿದ್ದರಿಂದ ಬೆಂಕಿ ವ್ಯಾಪಿಸಿತು. ಕೆಲವರನ್ನು ಬಾಲ್ಕನಿ ಮೂಲಕ ರಕ್ಷಿಸಲಾಗಿದ್ದರೂ, ಹಿಂಭಾಗದ ಫ್ಲಾಟ್ಗಳಲ್ಲಿ ವಾಸವಿದ್ದ ಇನ್ನೂ ಒಂದೆರಡು ಕುಟುಂಬಗಳು ಸಿಲುಕಿರುವ ಸಾಧ್ಯತೆಯಿದೆ’ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸದ್ಯ ದೆಹಲಿ ಪೊಲೀಸರ ತಂಡವು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.