ಬೆಂಗಳೂರು: ಕೊರೊನಾ ಸೋಂಕು ತಗುಲಿದ್ದರಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ನಟರಾಜನ್ ಗುಣಮುಖವಾಗಿದ್ದು,ವಿಕ್ಟೋರಿಯಾ ಆಸ್ಪತ್ರೆಯಿಂದ ಭಾನುವಾರ ಬೆಳಿಗ್ಗೆ ಮನೆಗೆ ತೆರಳಿದರು.

ಶಶಿಕಲಾ ಕುಟುಂಬದವರು ಹಾಗೂ ಸಂಬಂಧಿಕರು, ಬೆಳಿಗ್ಗೆ 9 ಗಂಟೆಗೆ ಆಸ್ಪತ್ರೆಗೆ ಬಂದು ಹೊರಗಡೆ ಕಾಯುತ್ತಿದ್ದರು.

ಎಐಎಡಿಎಂಕೆ ಮುಖಂಡರು ಹಾಗೂ ಕಾರ್ಯಕರ್ತರೂ ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆ ಬಳಿ ಸೇರಿದ್ದರು.

ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ದಕ್ಷಿಣ ವಿಭಾಗದ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು. ಆಸ್ಪತ್ರೆ ಎದುರು ಬ್ಯಾರಿಕೇಡ್ಗಳನ್ನು ಅಳವಡಿಸಿ, ಕಾರ್ಯಕರ್ತರನ್ನು ತಡೆದಿದ್ದರು.

ಆಸ್ಪತ್ರೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಶಶಿಕಲಾ, ಬೆಳಿಗ್ಗೆ 11.30ರ ಸುಮಾರಿಗೆ ಆಸ್ಪತ್ರೆಯಿಂದ ಹೊರ ಬಂದರು. ಕುಟುಂಬಸ್ಥರ ಜೊತೆಯಲ್ಲಿ ದಿವಂಗತ ಜಯಲಲಿತಾ ಅವರು ಬಳಸಿದ್ದ ಕಾರಿನಲ್ಲಿ ಹೊರಟು ಹೋದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.