ನವದೆಹಲಿ: ಭಾರತ–ರಷ್ಯಾದ 23ನೇ ವಾರ್ಷಿಕ ಶೃಂಗಸಭೆಗಾಗಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಇಂದು ಸಂಜೆ (ಡಿ.4) ಇಲ್ಲಿಗೆ ಆಗಮಿಸಿದರು.

ಇಲ್ಲಿನ ಪಾಲಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವ್ಲಾದಿಮಿರ್ ಪುಟಿನ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಉಭಯ ದೇಶಗಳ ರಾಜತಾಂತ್ರಿಕ ಅಧಿಕಾರಿಗಳು ಉಪಸ್ಥಿತರಿದ್ದರು.
.ಭಾರತಕ್ಕೆ ಇಂದು ಪುಟಿನ್ ಭೇಟಿ: ಯುದ್ಧೋಪಕರಣಗಳ ತ್ವರಿತ ಪೂರೈಕೆ ಕುರಿತು ಮಾತು.ಪುಟಿನ್ ಭೇಟಿ: ಭಾರತದ ಜೊತೆ ಅಣು ಸಹಕಾರ ಒಪ್ಪಂದಕ್ಕೆ ರಷ್ಯಾ ಸಂಪುಟ ಅಸ್ತು.
ಪುಟಿನ್ ಅವರ ನಿಯೋಗದಲ್ಲಿ ರಷ್ಯಾ ಅಧಿಕಾರಿಗಳು ಸೇರಿದಂತೆ ರಕ್ಷಣಾ ಸಚಿವ ಆಂಡ್ರೆ ಬೆಲೊಸೊವ್ ಕೂಡ ಇದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಪುಟಿನ್ ಅವರೊಂದಿಗೆ ರಾತ್ರಿ ಔತಣಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ರಷ್ಯಾದ ಆಂಡ್ರೆ ಬೆಲೊಸೊವ್ ಅವರು ಗುರುವಾರ ರಾತ್ರಿ ಮಾತುಕತೆ ನಡೆಸಲಿದ್ದಾರೆ.

ವಾರ್ಷಿಕ ಶೃಂಗಸಭೆಗಾಗಿ ಅವರು ಎರಡು ದಿನ ಭಾರತಕ್ಕೆ ಭೇಟಿ ನೀಡಿದ್ದಾರೆ.

ಎಸ್– 400 ಕ್ಷಿಪಣಿ ವ್ಯವಸ್ಥೆಗಳ ಖರೀದಿ, ಸುಖೋಯ್–30 ಎಂಕೆಐ ಯುದ್ಧ ವಿಮಾನಗಳನ್ನು ಮೇಲ್ದರ್ಜೆಗೇರಿಸುವುದು ಹಾಗೂ ರಷ್ಯಾದಿಂದ ಇತರ ಮಿಲಿಟರಿ ಸಾಧನಗಳನ್ನು ಖರೀದಿಸುವುದರಲ್ಲಿ ಭಾರತದ ಆಸಕ್ತಿ ಕುರಿತು ಉಭಯ ನಾಯಕರು ಮಾತುಕತೆ ನಡೆಸಲಿದ್ದಾರೆ.

ನಾಗರಿಕ ಅಣುಶಕ್ತಿ ಕ್ಷೇತ್ರದಲ್ಲಿ ಭಾರತದ ಜೊತೆ ಸಹಕಾರವನ್ನು ಮತ್ತಷ್ಟು ವೃದ್ಧಿಸುವುದಕ್ಕೆ ಸಂಬಂಧಿಸಿದ ಒಡಂಬಡಿಕೆಗೆ (ಎಂಒಯು) ಉಭಯ ದೇಶಗಳು ಸಹಿ ಹಾಕುವ ನೀರಿಕ್ಷೆ ಇದೆ.
.ಪುಟಿನ್ ಭಾರತ ಭೇಟಿಗೂ ಮುನ್ನ ಉಕ್ರೇನ್ ಬಗ್ಗೆ ಅಮೆರಿಕದೊಂದಿಗೆ ಜೈಶಂಕರ್ ಚರ್ಚೆ.Russia-Ukraine Conflict: ಟ್ರಂಪ್-ಪುಟಿನ್ ನಡುವೆ ಎರಡು ಗಂಟೆಗೂ ಅಧಿಕ ಸಂಭಾಷಣೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.